Farmers’ Protest ಜಂತರ್ ಮಂತರ್​ನಲ್ಲಿ ಪ್ರತಿಭಟನೆಗೆ ಸಜ್ಜಾದ ರೈತರು, ದೆಹಲಿಯಲ್ಲಿ ಬಿಗಿ ಭದ್ರತೆ

Jantar Mantar: ಪ್ರತಿಭಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಯನ್ನು ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್ ಹಾಕಲಾಗಿದೆ. ಪೊಲೀಸರು ಈಗಾಗಲೇ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಾಗದ ಸಿಂಘು, ಟಿಕ್ರಿ ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದ ಇತರ ಸ್ಥಳಗಳಲ್ಲಿ ಭಾರೀ ಭದ್ರತೆಗೆ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

Farmers' Protest ಜಂತರ್ ಮಂತರ್​ನಲ್ಲಿ ಪ್ರತಿಭಟನೆಗೆ ಸಜ್ಜಾದ ರೈತರು, ದೆಹಲಿಯಲ್ಲಿ ಬಿಗಿ ಭದ್ರತೆ
ಸಿಂಘು ಗಡಿಯಿಂದ ಪ್ರತಿಭಟನೆಗೆ ಹೊರಡುತ್ತಿರುವ ರೈತರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 22, 2021 | 11:10 AM

ದೆಹಲಿ: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಂಸತ್ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿರುವ ರೈತರ ಪ್ರತಿಭಟನೆಯ ಮುನ್ನ ದೆಹಲಿ ಪೊಲೀಸರು ಜಂತರ್ ಮಂತರ್ ಸುತ್ತಮುತ್ತಲಿನ ಇಡೀ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ‘ಕಿಸಾನ್ ಪಂಚಾಯತ್’ ಎಂದು ಕರೆಯಲ್ಪಡುವ ಧರಣಿ ಸಂಸತ್ ಬಳಿ ಇಂದಿನಿಂದ ಪ್ರಾರಂಭವಾಗಲಿದೆ.

ಪ್ರತಿಭಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಯನ್ನು ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್ ಹಾಕಲಾಗಿದೆ. ಪೊಲೀಸರು ಈಗಾಗಲೇ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಾಗದ ಸಿಂಘು, ಟಿಕ್ರಿ ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದ ಇತರ ಸ್ಥಳಗಳಲ್ಲಿ ಭಾರೀ ಭದ್ರತೆಗೆ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

“ಟಿಕ್ರಿ ಗಡಿಯಲ್ಲಿ ಯಾವುದೇ ದುಷ್ಕರ್ಮಿಗಳ ಪ್ರವೇಶವನ್ನು ತಪ್ಪಿಸಲು ನಾವು ತಡೆಗಟ್ಟುವ ವ್ಯವಸ್ಥೆಗಳನ್ನು ಇರಿಸಿದ್ದೇವೆ. ಅವರು (ರೈತರು) ಇಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯದ ಕಾರಣ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ” ಎಂದು ಡಿಸಿಪಿ (ಹೊರಗಿನ ಜಿಲ್ಲೆ) ಪರ್ವಿಂದರ್ ಸಿಂಗ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಂಸತ್ತಿನತ್ತ ಮೆರವಣಿಗೆ ನಡೆಸುವುದಿಲ್ಲ ಎಂದು ಪ್ರತಿಭಟನಾಕಾರರಿಂದ ಭರವಸೆ ನೀಡಿದ ನಂತರ ದೆಹಲಿ ಪೊಲೀಸರು ರೈತರಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಿದರು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಕೊವಿಡ್ -19 ನಿಬಂಧನೆಗಳನ್ನು ಅನುಸರಿಸಿ ದಿನಕ್ಕೆ 200 ಪ್ರತಿಭಟನಾಕಾರರಿಗೆ ಮಾತ್ರ ಅನುಮತಿ ನೀಡಿದೆ. ಜುಲೈ 22 ರಿಂದ ಆಗಸ್ಟ್ 9 ರವರೆಗೆ ಅನುಮತಿ ನೀಡಲಾಗಿದೆ.

ಜನವರಿ 26 ಕೆಂಪು ಕೋಟೆ  ಹಿಂಸಾಚಾರದಂತಹ ಸಂದರ್ಭಗಳನ್ನು ನಿಭಾಯಿಸುವ ವ್ಯವಸ್ಥೆಗಳ ಬಗ್ಗೆ ಬಿಕೆಯು ನಾಯಕ ರಾಕೇಶ್ ಟಿಕಾಯತ್, ಸಂಸತ್ ಜಂತರ್ ಮಂತರ್​ನಿಂದ ಕೇವಲ 150 ಮೀಟರ್ ದೂರದಲ್ಲಿದೆ. ನಾವು ಅಲ್ಲಿ ನಮ್ಮದೇ ಸಂಸತ್ ಅಧಿವೇಶನಗಳನ್ನು ನಡೆಸುತ್ತೇವೆ. ನಾವು ಯಾಕೆ ಗೂಂಡಾಗಿರಿ ಮಾಡಬೇಕು? ನಾವು ದುಷ್ಕರ್ಮಿಗಳೇ?  ಎಂದು ಉತ್ತರಿಸಿದ್ದಾರೆ.

ಇತ್ತ ಪಂಜಾಬ್​​ನ  ಕಾಂಗ್ರೆಸ್ ಸಂಸದರು ಸಂಸತ್ ಆವರಣದಲ್ಲಿ  ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: Kisan Parliament ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ದೆಹಲಿ ಸರ್ಕಾರ ಅನುಮತಿ

(Farmers to march to Delhi Security beefed up at Jantar Mantar in view of farmers’ protest)

Published On - 11:08 am, Thu, 22 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ