ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೇಂದ್ರ ಸಚಿವ ಸಂಪುಟದ ಡೀಟೇಲ್ಸ್ ಇಲ್ಲಿದೆ
ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. […]
ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ನೆರವು ನೀಡಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂ. ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮೈಕ್ರೋ ಯೂನಿಟ್‌ಗಳ ಹೂಡಿಕೆಯ ಮಿತಿ 25 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಸಣ್ಣ ಯೂನಿಟ್‌ಗಳ ವಹಿವಾಟು 50 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ ಸಾಲ ನೀಡಲು 10ಸಾವಿರ ಕೋಟಿ ಅನುದಾನ ನೀಡಲಾಗುತ್ತೆ. ಇದರಿಂದ 50 ಲಕ್ಷ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ಕೊಡಲಾಗುತ್ತೆ.
ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ: ರೈತರ ಅನುಕೂಲಕ್ಕಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಣ್ಣ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗಿದ್ದು, ಸಾಲ ಮರುಪಾವತಿಗೆ ಆಗಸ್ಟ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಹರ್ಬಲ್ ಕೃಷಿಗೆ 4ಸಾವಿರ ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ರೈತ ಮಾಡಿದ ಖರ್ಚಿಗಿಂತ ಶೇ.50ರಿಂದ 83ರಷ್ಟು ಬೆಲೆ ಸಿಗುತ್ತೆ. ಮೀನುಗಾರಿಕೆಗೆ 20 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಕೊಡಲಾಗಿದೆ.
ಬೆಳೆಗಳ ಬೆಂಬಲ ಬೆಲೆ ಏರಿಕೆ: ಭತ್ತ, ಹತ್ತಿ, ಜೋಳದ ಬೆಳೆಗಳ ಬೆಂಬಲ ಬೆಲೆ ಏರಿಕೆ. ಹತ್ತಿಗೆ ಕನಿಷ್ಠ ಬೆಂಬಲ ಬೆಲೆ 260 ರೂಪಾಯಿ ಏರಿಕೆ. ರಾಗಿ, ಹುರುಳಿ, ಶೇಂಗಾ, ಸೋಯಾಬಿನ್‌ಗೆ ಬೆಂಬಲ ಬೆಲೆ. ಈ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇಕಡಾ 50ರಷ್ಟು ಏರಿಕೆ ಮಾಡಲು ಕೇಂದ್ರ ಸಂಪುಟ ಸಭೆ ಅಸ್ತು.