AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಶ್ಮೀರಿಗಳಿಗೆ ಪಾಕಿಸ್ತಾನದ ರಕ್ಷಣೆ, ಕೇಂದ್ರ ಸರ್ಕಾರ ಮೌನ’: ತೀವ್ರ ವಿವಾದಕ್ಕೆ ಗುರಿಯಾದ ಫಾರೂಕ್ ಅಬ್ದುಲ್ಲಾ ಹೇಳಿಕೆ

ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ನೀಡಿರುವ ಹೇಳಿಕೆ ಈಗ ತೀವ್ರ ವಿವಾದಕ್ಕೆ ಗುರಿಯಾಗಿದೆ. ಅವರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ. ಹಾಗಾದರೆ, ಫಾರೂಕ್ ಅಬ್ದುಲ್ಲಾ ಹೇಳಿದ್ದೇನು? ಇಲ್ಲಿದೆ ವಿವರ.

‘ಕಾಶ್ಮೀರಿಗಳಿಗೆ ಪಾಕಿಸ್ತಾನದ ರಕ್ಷಣೆ, ಕೇಂದ್ರ ಸರ್ಕಾರ ಮೌನ’: ತೀವ್ರ ವಿವಾದಕ್ಕೆ ಗುರಿಯಾದ ಫಾರೂಕ್ ಅಬ್ದುಲ್ಲಾ ಹೇಳಿಕೆ
ಫಾರೂಕ್ ಅಬ್ದುಲ್ಲಾImage Credit source: PTI
ಗಣಪತಿ ಶರ್ಮಾ
|

Updated on: Oct 24, 2026 | 9:56 PM

Share

ಮುಖ್ಯಾಂಶಗಳು

  • ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಬಿಜೆಪಿ ನಾಯಕರ ತೀವ್ರ ವಿರೋಧ
  • ದೇಶದ್ರೋಹ ಪ್ರಕರಣ ದಾಖಲಿಸಲು ಬಿಜೆಪಿ ನಾಯಕರ ಆಗ್ರಹ
  • ಭಾರತದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಬೇಡ ಎಂದ ಕಾಂಗ್ರೆಸ್‌

ನವದೆಹಲಿ, ಅಕ್ಟೋಬರ್ 24: ಜಮ್ಮು ಮತ್ತು ಕಾಶ್ಮೀರದ ಜನರ ಕುರಿತು ಹಾಗೂ ಪಾಕಿಸ್ತಾನದ ಪಾತ್ರದ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್‌ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ನೀಡಿರುವ ಹೇಳಿಕೆ ಈಗ ತೀವ್ರ ವಿವಾದ ಹಾಗೂ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಕೆಲವರು ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದು, ಭಾರತದ ಆಂತರಿಕ ವಿಚಾರಗಳಲ್ಲಿ ಪಾಕಿಸ್ತಾನದ ಹಸ್ತಕ್ಷೇಪವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಫಾರೂಕ್ ಅಬ್ದುಲ್ಲಾ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಫಾರೂಕ್ ಅಬ್ದುಲ್ಲಾ, ಕಾಶ್ಮೀರದ ವಿಚಾರವನ್ನು ಪಾಕಿಸ್ತಾನ ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದರಿಂದ ಅಲ್ಲಿನ ಜನರ ಅಸ್ತಿತ್ವಕ್ಕೆ ಮಾನ್ಯತೆ ಸಿಗುತ್ತಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಜಾಗತಿಕ ಒತ್ತಡದಿಂದ ಭಾರತ ಸರ್ಕಾರ ಮೌನವಾಗಿದೆ ಎಂದಿದ್ದ ಅವರು, ಕಾಶ್ಮೀರದ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಪಾಕಿಸ್ತಾನ ಎಲ್ಲೆಡೆ ಹೇಳುತ್ತಿದೆ ಮತ್ತು ಅದು ಕಾಶ್ಮೀರಿಗಳನ್ನು ರಕ್ಷಿಸುತ್ತಿದೆ ಎಂದು ಪ್ರತಿಪಾದಿಸಿದ್ದರು. ಭಾರತ ಸರ್ಕಾರದ ಉದ್ದೇಶಗಳು ಸರಿಯಾಗಿಲ್ಲ ಎಂದೂ ಅವರು ಆರೋಪಿಸಿದ್ದರು.

ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಬಿಜೆಪಿ ಕಿಡಿ

ಫಾರೂಕ್ ಅಬ್ದುಲ್ಲಾ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ನಾಯಕರು, ಪಾಕಿಸ್ತಾನವನ್ನು ಕಾಶ್ಮೀರಿಗಳ ರಕ್ಷಕ ಎಂದು ಬಿಂಬಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ರಾಜ್ಯಾಧ್ಯಕ್ಷ ರವೀಂದರ್ ರೈನಾ, ಹೇಳಿಕೆಯನ್ನು ಖಂಡಿಸಿದ್ದಾರೆ. ಇಂಥ ಹೇಳಿಕೆ ದುರದೃಷ್ಟಕರ ಎಂದು ಕರೆದಿದ್ದಾರೆ. ಪಾಕಿಸ್ತಾನ ಕಾಶ್ಮೀರದ ಜನರು, ಮಕ್ಕಳು ಮತ್ತು ಮಹಿಳೆಯರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದ ಅವರು, ಈ ಹೇಳಿಕೆ ದೇಶದ್ರೋಹದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್.ಪಿ. ಸಿಂಗ್ ಕೂಡ ಫಾರೂಕ್ ಅಬ್ದುಲ್ಲಾ ಗಡಿಯಾಚೆಗಿನ ಕಾಶ್ಮೀರದ ಪರಿಸ್ಥಿತಿಯನ್ನು ಗಮನಿಸಬೇಕು ಎಂದು ಹೇಳಿದ್ದಾರೆ. 370ನೇ ವಿಧಿ ರದ್ದತಿ ಮತ್ತು ಜಮ್ಮು-ಕಾಶ್ಮೀರದ ಭಾರತದೊಂದಿಗೆ ಪೂರ್ಣ ಏಕೀಕರಣದಿಂದಾಗಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿದೆ ಎಂಬುದು ಬಿಜೆಪಿಯ ವಾದವಾಗಿದೆ. ಪ್ರವಾಸೋದ್ಯಮದ ಬೆಳವಣಿಗೆಯನ್ನೂ ಅವರು ಇದಕ್ಕೆ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ.

ಪಾಕಿಸ್ತಾನದ ನಿಲುವಿಗೆ ಧ್ವನಿಯಾಗುತ್ತಿದೆ ನ್ಯಾಷನಲ್ ಕಾನ್ಫರೆನ್ಸ್: ಬಿಜೆಪಿ

ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯೆ ಯಾಮಿನಿ ಶರ್ಮಾ ಸಹ ಅಬ್ದುಲ್ಲಾ ಹೇಳಿಕೆ ಖಂಡಿಸಿದ್ದು, ಆ ಹೇಳಿಕೆ ಭಾರತದ ಸಂವಿಧಾನ ಮತ್ತು ದೇಶಭಕ್ತ ಕಾಶ್ಮೀರಿಗಳಿಗೆ ಅವಮಾನವಾಗಿದೆ ಎಂದಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಯಿಂದ ಕಣಿವೆಯಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದಿರುವ ಅವರು, ನ್ಯಾಷನಲ್ ಕಾನ್ಫರೆನ್ಸ್ ಪಾಕಿಸ್ತಾನದ ನಿಲುವಿಗೆ ಧ್ವನಿಯಾಗುತ್ತಿದೆ ಎಂದು ಟೀಕಿಸಿದ್ದಾರೆ.

ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

ಬಿಜೆಪಿ ಶಾಸಕ ಯುಧ್ವೀರ್ ಸೇಥಿ ಕೂಡ ಹೇಳಿಕೆಯನ್ನು ಖಂಡಿಸಿದ್ದು, ದೇಶದ ವಿರುದ್ಧ ಮಾತನಾಡುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆ ಮತ್ತು ರಕ್ತಪಾತಕ್ಕೆ ಕಾರಣವಾಗಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಅವರು, ಫಾರೂಕ್ ಅಬ್ದುಲ್ಲಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಕಾಂಗ್ರೆಸ್‌ ಪ್ರತಿಕ್ರಿಯೆ ಏನು?

ಈ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕಪಿಲ್ ಸಿಂಗ್, ಫಾರೂಕ್ ಅಬ್ದುಲ್ಲಾ ಹೇಳಿಕೆ ವೈಯಕ್ತಿಕ ಅಭಿಪ್ರಾಯವಾಗಿರಬಹುದು ಎಂದಿದ್ದಾರೆ. ಇದೇ ವೇಳೆ, ಭಾರತದ ಆಂತರಿಕ ವಿಚಾರಗಳಲ್ಲಿ ಪಾಕಿಸ್ತಾನಕ್ಕೆ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದ ಏಕತೆ ಮತ್ತು ಸಮಗ್ರತೆ ಪಾಕಿಸ್ತಾನ ಅಥವಾ ಬೇರೆ ಯಾವುದೇ ವಿದೇಶಿ ರಾಷ್ಟ್ರವನ್ನು ಅವಲಂಬಿಸಿಲ್ಲ ಎಂದು ಹೇಳಿರುವ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ವಿಚಾರದಲ್ಲಿ ಜನರು ಅಸಮಾಧಾನ ಹೊಂದಿದ್ದಾರೆ ಎಂದಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

LIVE TV

ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ ಅವರು 2024ರಿಂದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾರೆ. ತಂದೆಯ ಹೇಳಿಕೆ ಕುರಿತು ಒಮರ್ ಅಬ್ದುಲ್ಲಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಟ್ಟಿನಲ್ಲಿ, ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ಫಾರೂಕ್ ಅಬ್ದುಲ್ಲಾ ನೀಡಿರುವ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಬಿಜೆಪಿಯ ನಾಯಕರು ಹೇಳಿಕೆಯನ್ನು ದೇಶವಿರೋಧಿ ಎಂದು ಟೀಕಿಸಿದರೆ, ಕಾಂಗ್ರೆಸ್‌ ಭಾರತದ ಆಂತರಿಕ ವಿಚಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ವಿರೋಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್