ಜನವರಿ 1ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ

ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜನವರಿ 1, 2021ರಿಂದ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್​ ಟ್ಯಾಗ್​ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮೋಟಾರು ವಾಹನ ನಿಯಮ 1989ಕ್ಕೆ ತಿದ್ದುಪಡಿಯನ್ನು ಮಾಡುವ ಮೂಲಕ ಸಚಿವಾಲಯ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹೊಸದಾಗಿ ತೃತೀಯ ವಿಮೆಯನ್ನು (ಥರ್ಡ್​ ಪಾರ್ಟಿ ವಿಮೆ) ಪಡೆಯುವಾಗ ಮಾನ್ಯ ಫಾಸ್ಟ್​ ಟ್ಯಾಗ್ ಕಡ್ಡಾಯವಾಗಿದ್ದು, ಈ ಅಧಿಸೂಚನೆಯು ಎಲೆಕ್ಟ್ರಾನಿಕ್ ಹಣ ಪಾವತಿ ಪದ್ಧತಿ ಮೂಲಕ ಮಾತ್ರ ಟೋಲ್ ಪ್ಲಾಜಾನಲ್ಲಿ ಶೇಕಡಾ […]

ಜನವರಿ 1ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ
ಸಾಂದರ್ಭಿಕ ಚಿತ್ರ
Follow us
KUSHAL V
|

Updated on:Nov 09, 2020 | 4:52 PM

ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜನವರಿ 1, 2021ರಿಂದ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್​ ಟ್ಯಾಗ್​ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮೋಟಾರು ವಾಹನ ನಿಯಮ 1989ಕ್ಕೆ ತಿದ್ದುಪಡಿಯನ್ನು ಮಾಡುವ ಮೂಲಕ ಸಚಿವಾಲಯ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಹೊಸದಾಗಿ ತೃತೀಯ ವಿಮೆಯನ್ನು (ಥರ್ಡ್​ ಪಾರ್ಟಿ ವಿಮೆ) ಪಡೆಯುವಾಗ ಮಾನ್ಯ ಫಾಸ್ಟ್​ ಟ್ಯಾಗ್ ಕಡ್ಡಾಯವಾಗಿದ್ದು, ಈ ಅಧಿಸೂಚನೆಯು ಎಲೆಕ್ಟ್ರಾನಿಕ್ ಹಣ ಪಾವತಿ ಪದ್ಧತಿ ಮೂಲಕ ಮಾತ್ರ ಟೋಲ್ ಪ್ಲಾಜಾನಲ್ಲಿ ಶೇಕಡಾ 100ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ವಾಹನಗಳು ಮನಬಂದಂತೆ ಟೋಲ್ ಪ್ಲಾಜಾನಲ್ಲಿ ಹಾದುಹೋಗುವುದನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಪ್ರಮುಖ ಹೆಜ್ಜೆಯಾಗಿರುತ್ತದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಬಂಧ ಅನೇಕ ವಾಹಿನಿಗಳ ಮೂಲಕ ಫಾಸ್ಟ್ಟ್ ಟ್ಯಾಗ್ ಲಭ್ಯತೆಯನ್ನು ಖಾತರಿಪಡಿಸಿಕೊಳ್ಳುವ ಭೌತಿಕ ಸ್ಥಳಗಳು ಮತ್ತು ಆನ್​ಲೈನ್ ಕಾರ್ಯವಿಧಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಈ ಮೂಲಕ ನಾಗರೀಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮುಂದಿನ ಎರಡು ತಿಂಗಳಲ್ಲಿ ಈ ಫಾಸ್ಟ್ ಟ್ಯಾಗ್​ನ ತಮ್ಮ ವಾಹನಗಳಿಗೆ ಜೋಡಿಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 1, 2017 ರಿಂದ, ಹೊಸ ನಾಲ್ಕು ಚಕ್ರ ವಾಹನಗಳ ಎಲ್ಲಾ ನೋಂದಣಿಗೆ ಫಾಸ್ಟ್ ಟ್ಯಾಗ್​ನ ಕಡ್ಡಾಯಗೊಳಿಸಲಾಗಿದ್ದು, ಇದನ್ನು ತಯಾರಕರು ಮತ್ತು ವಿತರಕರು ಪೂರೈಸುತ್ತಿದ್ದಾರೆ. ಕೇಂದ್ರ ಮೋಟಾರು ವಾಹನ ನಿಯಮ1989ರ ಪ್ರಕಾರ, ಡಿಸೆಂಬರ್ 1, 2017ರಿಂದ ಹೊಸ ನಾಲ್ಕು ಚಕ್ರ ವಾಹನಗಳ ಎಲ್ಲಾ ನೋಂದಣಿಗೆ ಫಾಸ್ಟ್ ಟ್ಯಾಗ್​ನ ಕಡ್ಡಾಯಗೊಳಿಸಲಾಗಿದೆ. ಸಾರಿಗೆ ವಾಹನಗಳಿಗೆ ಫಾಸ್ಟ್ ಟ್ಯಾಗ್​ ಅಳವಡಿಸಿದ ನಂತರವೇ ಫಿಟ್ ನೆಸ್ ಪ್ರಮಾಣಪತ್ರವನ್ನು ನವೀಕರಿಸಲಾಗುವುದು ಎಂದು ಆದೇಶಿಸಲಾಗಿದೆ. ಅದರಂತೆ ರಾಷ್ಟ್ರೀಯ ಪರವಾನಿಗೆ ಇರುವ ವಾಹನಗಳಿಗೆ ಫಾಸ್ಟ್ ಟ್ಯಾಗ್​ನ ಫಿಟ್​ಮೆಂಟ್​ನ ಅಕ್ಟೋಬರ್ 1, 2019ರಿಂದ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವಾಲಯವು ಹೇಳಿದೆ.

ಫಾರ್ಮ್ 51(ವಿಮಾ ಪ್ರಮಾಣಪತ್ರ)ರ ತಿದ್ದುಪಡಿಯ ಮೂಲಕ ಹೊಸ 3ನೇ ವ್ಯಕ್ತಿಯು ವಿಮೆಯನ್ನು ಪಡೆಯುವಾಗ ಮಾನ್ಯ ಫಾಸ್ಟ್ ಟ್ಯಾಗ್ ಐಡಿಯ ವಿವರಗಳನ್ನು ಸೆರೆಹಿಡಿಯಲಾಗುತ್ತದೆ. ಈ ನಿಬಂಧನೆಯು ಏಪ್ರಿಲ್ 1, 2021ರಿಂದ ಅನ್ವಯವಾಗುತ್ತದೆ.

Published On - 4:51 pm, Mon, 9 November 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ