ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ

ಭೋಪಾಲ್‌ನಲ್ಲಿ ಸಂಭವಿಸಿದ ನೋಯ್ಡಾ ಮೂಲದ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು ಈಗ ಭಾರಿ ರಾಜಕೀಯ ಮತ್ತು ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ ಮೃತಳ ಕುಟುಂಬಸ್ಥರು ನಡೆಸುತ್ತಿರುವ ಹೋರಾಟದ ಸಂಪೂರ್ಣ ವಿವರ ಇಲ್ಲಿದೆ.ನನ್ನ ಮಗಳ ಸಾವಿಗೆ ನ್ಯಾಯ ಸಿಗದಿದ್ದರೆ ನಾನು ಮುಖ್ಯಮಂತ್ರಿಯವರ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡು ಪ್ರಾಣ ಬಿಡುತ್ತೇನೆ ಎಂದು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಏಮ್ಸ್ ಭೋಪಾಲ್ ನೀಡಿರುವ ಆರಂಭಿಕ ಮರಣೋತ್ತರ ಪರೀಕ್ಷೆಯ ವರದಿ ತೃಪ್ತಿಕರವಾಗಿಲ್ಲ ಎಂದು ಆರೋಪಿಸಿರುವ ಕುಟುಂಬಸ್ಥರು, ದೆಹಲಿಯ ಏಮ್ಸ್‌ನಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಮಗಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ
ತ್ವಿಷಾ
Image Credit source: India Today

Updated on: May 18, 2026 | 8:17 AM

ಭೋಪಾಲ್, ಮೇ 18: ಗಂಡನ ಮನೆಯಲ್ಲಿ ಮಹಿಳೆ(Woman) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 31 ವರ್ಷ ತ್ವಿಶಾ ಸಾವು ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿರುವ ತ್ವಿಶಾ ಅವರ ತಂದೆ ನ್ಯಾಯಕ್ಕಾಗಿ ಒತ್ತಾಯಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿವಾಸದ ಹೊರಗೆ ಸುಡುವ ಬಿಸಿಲಿನಲ್ಲೇ ಬೃಹತ್ ಪ್ರತಿಭಟನೆ ನಡೆಸಿದರು. ಒಂದೊಮ್ಮೆ ನ್ಯಾಯ ಸಿಗದಿದ್ದರೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನನ್ನ ಮಗಳ ಸಾವಿಗೆ ನ್ಯಾಯ ಸಿಗದಿದ್ದರೆ ನಾನು ಮುಖ್ಯಮಂತ್ರಿಯವರ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡು ಪ್ರಾಣ ಬಿಡುತ್ತೇನೆ ಎಂದು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಏಮ್ಸ್ ಭೋಪಾಲ್ ನೀಡಿರುವ ಆರಂಭಿಕ ಮರಣೋತ್ತರ ಪರೀಕ್ಷೆಯ ವರದಿ ತೃಪ್ತಿಕರವಾಗಿಲ್ಲ ಎಂದು ಆರೋಪಿಸಿರುವ ಕುಟುಂಬಸ್ಥರು, ದೆಹಲಿಯ ಏಮ್ಸ್‌ನಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಮಗಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ತ್ವಿಶಾ ಅವರ ಪತಿ ಸಮರ್ಥ್ ಸಿಂಗ್ (ವಕೀಲ) ಮತ್ತು ಅತ್ತೆ ಗಿರಿಬಾಲಾ ಸಿಂಗ್ ತುಂಬಾ ದಿನಗಳಿಂದ ಆಕೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ದೂರಿದ್ದಾರೆ. ವಿಚಾರಣೆ ಆರಂಭವಾಗುವ ಮುನ್ನವೇ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗುತ್ತಿದೆ. ಕುಟುಂಬವು ತಮ್ಮ ಪ್ರಭಾವವನ್ನು ಬಳಸಿ ತನಿಖೆಯ ಹಾದಿ ತಪ್ಪಿಸುತ್ತಿದೆ.

ಮಗಳ ಸಾವಿನ ಎರಡು ದಿನಗಳ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ (SIT) ದ ಮೇಲೂ ನಂಬಿಕೆ ಕಳೆದುಕೊಂಡಿರುವ ಕುಟುಂಬವು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದೆ. ತ್ವಿಶಾ ಅವರ ದೇಹದ ಕೈ ಮತ್ತು ಕಿವಿಗಳ ಮೇಲೆ ಗಾಯದ ಗುರುತುಗಳಿದ್ದು, ಪ್ರಕರಣವನ್ನು ಬಲವಂತವಾಗಿ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂಬುದು ಅವರ ಆರೋಪವಾಗಿದೆ.

ಮತ್ತಷ್ಟು ಓದಿ: Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಪ್ರಸ್ತುತ ಇರುವ ಭೀಕರ ಬಿಸಿಲಿನಿಂದಾಗಿ ಶವ ಕೊಳೆಯದಂತೆ ತಡೆಯಲು ತ್ವಿಶಾ ಅವರ ದೇಹವನ್ನು ಮೈನಸ್ 4 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂರಕ್ಷಿಸಿಡಬೇಕೆಂದು ಕುಟುಂಬಸ್ಥರು ಸಿಎಂ ಅವರ ಒಎಸ್‌ಡಿ ಬಳಿ ವಿನಂತಿಸಿದ್ದಾರೆ. ಇದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ಸಹ ಅವರು ಸಜ್ಜಾಗಿದ್ದಾರೆ.

ವರದಕ್ಷಿಣೆ ಕಿರುಕುಳ, ಹಲ್ಲೆ ಮತ್ತು ಸಾಕ್ಷ್ಯ ನಾಶದ ಆರೋಪಗಳ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದ್ದು, ಎಸಿಪಿ ರಜನೀಶ್ ಕಶ್ಯಪ್ ಇದರ ನೇತೃತ್ವ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಪತಿ ಸಮರ್ಥ್ ಸಿಂಗ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಕಟಾರಾ ಹಿಲ್ಲಸ್ ಠಾಣೆಯ ಉಸ್ತುವಾರಿ ಸುನಿಲ್ ದುಬೆ ತಿಳಿಸಿದ್ದಾರೆ. ನಿವೃತ್ತ ನ್ಯಾಯಾಧೀಶರ ಜಾಮೀನನ್ನು ಪ್ರಶ್ನಿಸಿ ಕಾನೂನು ಹೋರಾಟ ಮುಂದುವರಿಸಲಾಗುವುದು, ಆದರೆ ಕುಟುಂಬಸ್ಥರು ಶವ ಸ್ವೀಕರಿಸದಿದ್ದರೆ ಕಾನೂನಿನ ನಿಯಮಗಳ ಪ್ರಕಾರ ತಾವೇ ಅಂತ್ಯಕ್ರಿಯೆ ನಡೆಸಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ನೋಯ್ಡಾ ಮೂಲದ ತ್ವಿಶಾ ಶರ್ಮಾ ಮತ್ತು ವಕೀಲ ಸಮರ್ಥ್ ಸಿಂಗ್ 2025ರ ಡಿಸೆಂಬರ್‌ನಲ್ಲಿ ವಿವಾಹವಾಗಿದ್ದರು. ಆದರೆ ಕಿರುಕುಳ ತಾಳಲಾರದೆ ತ್ವಿಶಾ ನೋಯ್ಡಾಗೆ ಮರಳಲು ಬಯಸಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಮೇ 12 ರ ರಾತ್ರಿ ಅವರು ಶವವಾಗಿ ಪತ್ತೆಯಾಗಿದ್ದು, ಇಡೀ ಪ್ರಕರಣ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us