AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ

ಕುಟುಕ ತಂದೆಯೊಬ್ಬ ಮಗ ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕೋಪದಿಂದ ಮಗನಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶನಿವಾರ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ. ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಅವನ ತಂದೆ ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು.

ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ
ಸಾವುImage Credit source: India.com
ನಯನಾ ರಾಜೀವ್
|

Updated on: Feb 10, 2025 | 10:47 AM

Share

ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕುಡುಕ ತಂದೆಯೊಬ್ಬ 14 ವರ್ಷದ ಮಗನನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶನಿವಾರ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ. ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಅವನ ತಂದೆ ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು.

ವ್ಯಕ್ತಿ ತನ್ನ ಮಗನ ಎದೆಗೆ ಹೊಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆತ ಪ್ರಸ್ತುತ ಪರಾರಿಯಾಗಿದ್ದಾನೆ.

ಮರದಲ್ಲಿ ನೇತಾಡುತ್ತಿತ್ತು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಶವ ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಕಾಡಿನಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಇಬ್ಬರು ಬಾಲಕಿಯರ ಶವಗಳು ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಬಾಲಕಿಯರು ಎರಡು ದಿನಗಳಿಂದ ಕಾಣೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರೂ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದರು.

ಗುರುವಾರ ಶಾಲೆ ಮುಗಿದ ನಂತರ ಮನೆಗೆ ಹಿಂತಿರುಗಿಲ್ಲ ಎಂದು ಕುಟುಂಬ ಸದಸ್ಯರು ದೂರು ನೀಡಿದ್ದರು. ಮಾಹಿತಿ ಪಡೆದ ನಂತರ, ಮಲ್ಕಂಗಿರಿ ಎಸ್‌ಡಿಪಿಒ ಸಚಿನ್ ಪಟೇಲ್ ಅವರೊಂದಿಗೆ ಎಂವಿ 79 ಪೊಲೀಸ್ ಠಾಣೆ ಮತ್ತು ಮೋಟು ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಘಟನೆಯ ತನಿಖೆ ಆರಂಭಿಸಿದರು ಎಂದು ಅವರು ಹೇಳಿದರು. ಸಾವಿಗೆ ಕಾರಣ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ