
ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕುಡುಕ ತಂದೆಯೊಬ್ಬ 14 ವರ್ಷದ ಮಗನನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶನಿವಾರ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ಸಂಭವಿಸಿದೆ. ತಡವಾಗಿ ಮನೆಗೆ ಬಂದಿದ್ದಕ್ಕಾಗಿ ಅವನ ತಂದೆ ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು.
ವ್ಯಕ್ತಿ ತನ್ನ ಮಗನ ಎದೆಗೆ ಹೊಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆತ ಪ್ರಸ್ತುತ ಪರಾರಿಯಾಗಿದ್ದಾನೆ.
ಮರದಲ್ಲಿ ನೇತಾಡುತ್ತಿತ್ತು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಶವ
ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಕಾಡಿನಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಇಬ್ಬರು ಬಾಲಕಿಯರ ಶವಗಳು ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ಬಾಲಕಿಯರು ಎರಡು ದಿನಗಳಿಂದ ಕಾಣೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರೂ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದರು.
ಗುರುವಾರ ಶಾಲೆ ಮುಗಿದ ನಂತರ ಮನೆಗೆ ಹಿಂತಿರುಗಿಲ್ಲ ಎಂದು ಕುಟುಂಬ ಸದಸ್ಯರು ದೂರು ನೀಡಿದ್ದರು. ಮಾಹಿತಿ ಪಡೆದ ನಂತರ, ಮಲ್ಕಂಗಿರಿ ಎಸ್‌ಡಿಪಿಒ ಸಚಿನ್ ಪಟೇಲ್ ಅವರೊಂದಿಗೆ ಎಂವಿ 79 ಪೊಲೀಸ್ ಠಾಣೆ ಮತ್ತು ಮೋಟು ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಘಟನೆಯ ತನಿಖೆ ಆರಂಭಿಸಿದರು ಎಂದು ಅವರು ಹೇಳಿದರು. ಸಾವಿಗೆ ಕಾರಣ ತಿಳಿದುಬಂದಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ