AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ಅಪಘಾತದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಮೃತ ಪೈಲಟ್​ನ ತಂದೆ

ಅಹಮದಾಬಾದ್​​ನಲ್ಲಿ ಏರ್ ಇಂಡಿಯಾ ಪತನವಾದ ಸಾವನ್ನಪ್ಪಿದ ಪೈಲಟ್‌ನ ತಂದೆ ಈ ಅಪಘಾತದ ನ್ಯಾಯಾಂಗ ತನಿಖೆಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 12, 2023 ರಂದು ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್‌ನಿಂದ ಹೊರಟ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ 241 ಪ್ರಯಾಣಿಕರು ಸೇರಿದಂತೆ 260 ಜನರು ಸಾವನ್ನಪ್ಪಿದರು. 

ಏರ್ ಇಂಡಿಯಾ ಅಪಘಾತದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಮೃತ ಪೈಲಟ್​ನ ತಂದೆ
Air India Pilot Father
ಸುಷ್ಮಾ ಚಕ್ರೆ
|

Updated on:Oct 16, 2025 | 6:48 PM

Share

ಅಹಮದಾಬಾದ್, ಅಕ್ಟೋಬರ್ 16: ಜೂನ್‌ನಲ್ಲಿ ಅಹಮದಾಬಾದ್ ಬಳಿ ಅಪಘಾತಕ್ಕೀಡಾಗಿ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ (Air India) ಬೋಯಿಂಗ್ 787-8 ಡ್ರೀಮ್‌ಲೈನರ್‌ನ ಪೈಲಟ್-ಇನ್-ಕಮಾಂಡ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ 91 ವರ್ಷದ ತಂದೆ ಇದೀಗ ಈ ದುರಂತದ ಬಗ್ಗೆ ಸ್ವತಂತ್ರ, ನ್ಯಾಯಾಂಗ ತನಿಖೆಗಾಗಿ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 10ರಂದು ಭಾರತೀಯ ಪೈಲಟ್‌ಗಳ ಒಕ್ಕೂಟ (ಎಫ್‌ಐಪಿ) ನೊಂದಿಗೆ ಜಂಟಿಯಾಗಿ ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಯು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ “ಕೋರ್ಟ್ ಮಾನಿಟರ್ಡ್ ಕಮಿಟಿ”ಯನ್ನು ರಚಿಸುವಂತೆ ಕೋರಿದೆ. ಅಪಘಾತದ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ತಾಂತ್ರಿಕವಾಗಿ ಉತ್ತಮ ತನಿಖೆಯನ್ನು ನಡೆಸಲು ಈ ಸಮಿತಿ ರಚಿಸಲು ಮನವಿ ಮಾಡಲಾಗಿದೆ.

ಇದನ್ನೂ ಓದಿ: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ!

ಪ್ರಸ್ತುತ ಸರ್ಕಾರದ ತನಿಖೆಯು ಪೈಲಟ್ ದೋಷದ ಮೇಲೆ ಪ್ರಸ್ತಾಪಿಸುತ್ತಿರುವ ಬಗ್ಗೆ ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ. ಈ ತನಿಖೆಯು “ಮುಖ್ಯವಾಗಿ ಮೃತ ಪೈಲಟ್‌ಗಳ ಮೇಲೆ ಕೇಂದ್ರೀಕರಿಸುತ್ತದೆ. ಇತರ ತಾಂತ್ರಿಕ ಮತ್ತು ಕಾರ್ಯವಿಧಾನದ ಕಾರಣಗಳನ್ನು ಪರಿಶೀಲಿಸಲು ಈ ತನಿಖೆ ವಿಫಲವಾಗಿದೆ” ಎಂದು ಪೈಲಟ್​ನ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಕಾಕ್​ಪಿಟ್ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಜೂನ್ 12ರಂದು ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್‌ನಿಂದ ಹೊರಟ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ 241 ಪ್ರಯಾಣಿಕರು ಸೇರಿದಂತೆ 260 ಜನರು ಸಾವನ್ನಪ್ಪಿದರು. AAIB ಯ ಪ್ರಾಥಮಿಕ ವರದಿಯ ಪ್ರಕಾರ, ಬೋಯಿಂಗ್ 787 ಡ್ರೀಮ್‌ಲೈನರ್‌ನ ಇಂಧನ ಎಂಜಿನ್ ಸ್ವಿಚ್‌ಗಳು ಟೇಕ್ ಆಫ್ ಆದ ನಂತರ ಬಹುತೇಕ ಏಕಕಾಲದಲ್ಲಿ “ರನ್” ನಿಂದ “ಕಟ್ಆಫ್” ಗೆ ತಿರುಗಿದವು. ಇದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Thu, 16 October 25

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?