ಅರೇಂಜ್​ ಮ್ಯಾರೇಜ್​ಗೆ ಒಪ್ಪದ ಮಗಳ ತಲೆಗೆ ಗುಂಡು ಹಾರಿಸಿದ ಅಪ್ಪ!

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತಾನು ನಿಶ್ಚಯಿಸಿದ್ದ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ 19 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ತಂದೆಯೇ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಅತ್ಯಂತ ಆಘಾತಕಾರಿ ಘಟನೆ ವರದಿಯಾಗಿದೆ. 19 ವರ್ಷದ ಶಾಜಿಯಾ ಎಂಬ ಯುವತಿ ತಾನು ಪ್ರೀತಿಸುತ್ತಿದ್ದ ಯುವಕನನ್ನೇ ಮದುವೆಯಾಗಲು ಬಯಸಿದ್ದಳು. ಆದರೆ ಆಕೆಯ ತಂದೆ ಅಸಿನ್ ಖಾನ್ ಎಂಬ 48 ವರ್ಷದ ವ್ಯಕ್ತಿ ನವೆಂಬರ್ 19ರಂದು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು.

ಅರೇಂಜ್​ ಮ್ಯಾರೇಜ್​ಗೆ ಒಪ್ಪದ ಮಗಳ ತಲೆಗೆ ಗುಂಡು ಹಾರಿಸಿದ ಅಪ್ಪ!
Gun Shot

Updated on: Oct 20, 2026 | 10:33 PM

ಮೈನ್‌ಪುರಿ, ಅಕ್ಟೋಬರ್ 20: ತಂದೆ ನಿಶ್ಚಯಿಸಿದ್ದ ಮದುವೆಗೆ ನಿರಾಕರಿಸಿ, ತಾನು ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದ 19 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ತಂದೆಯೇ ರಾತ್ರಿ ಮಲಗಿದ್ದಾಗ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ವರದಿಯಾಗಿದೆ. ಶಾಜಿಯಾ ಎಂಬ ಯುವತಿಯೇ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವಾಕೆ. ಈ ಘಟನೆಯು ಸೋಮವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಭೋಗಾಂವ್ ಪಟ್ಟಣದಲ್ಲಿ ನಡೆದಿದೆ.

ಶಾಜಿಯಾಳೊಂದಿಗೆ ಬೇರೆ ಯುವಕನೊಬ್ಬನ ಪ್ರೇಮ ಸಂಬಂಧವಿತ್ತು, ಆಕೆಯನ್ನು ಮದುವೆಯಾಗಲು ಬಯಸಿದ್ದಳು. ಆದರೆ ಕೂಲಿ ಕಾರ್ಮಿಕನಾಗಿರುವ ಆಕೆಯ ತಂದೆ ಅಸಿನ್ ಖಾನ್ ನವೆಂಬರ್ 19ರಂದು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ತಂದೆ ಆಯ್ಕೆ ಮಾಡಿದ ವ್ಯಕ್ತಿಯನ್ನು ಮದುವೆಯಾಗಲು ಶಾಜಿಯಾ ಸ್ಪಷ್ಟವಾಗಿ ನಿರಾಕರಿಸಿದ್ದಳು.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್​ನಲ್ಲಿ ಪರಿಚಯವಾದವನಿಂದ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ!

ನಿದ್ರೆಯಲ್ಲಿರುವಾಗಲೇ ಗುಂಡೇಟು:

ತನ್ನ ಮಾತನ್ನು ಮೀರಿ ಪ್ರೀತಿಸಿದವನೊಂದಿಗೆ ಮದುವೆಯಾಗಲು ಪಟ್ಟು ಹಿಡಿದಿದ್ದಕ್ಕೆ ಕೋಪಗೊಂಡ ತಂದೆ ಅಸಿನ್ ಖಾನ್, ರಾತ್ರಿ ಶಾಜಿಯಾ ಗಾಢ ನಿದ್ರೆಯಲ್ಲಿದ್ದಾಗ ಆಕೆಯ ತಲೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಶಾಜಿಯಾ ಅವರನ್ನು ತಾಯಿ ಖೇರುನೀಶಾ ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸೈಫೈ ವೈದ್ಯಕೀಯ ಕಾಲೇಜಿಗೆ ಸಾಗಿಸಿದ್ದಾರೆ. ಸದ್ಯಕ್ಕೆ ಆ ಯುವತಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ತಂದೆ ಅಸಿನ್ ಖಾನ್‌ನನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದು, ತಾಯಿಯ ದೂರಿನ ಮೇರೆಗೆ ಕೊಲೆ ಯತ್ನದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us