Fauja Singh: ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು.

Fauja Singh:  ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ
ಫೌಜಾ ಸಿಂಗ್

Updated on: Jul 15, 2025 | 8:19 AM

ಜಲಂಧರ್, ಜುಲೈ 15: ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್  ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: ಶಿರೂರು ಗುಡ್ಡ ದುರಂತದಲ್ಲಿ ಅನಾಥವಾಗಿದ್ದ ಶ್ವಾನ ಮ್ಯಾರಥಾನ್​​ನಲ್ಲಿ ಓಟ: ಬೆಳ್ಳಿ ಪದಕ

 

ಜೀವನದಲ್ಲಿ ದುರಂತ, ವೈಯಕ್ತಿಕ ನಷ್ಟದ ಬಳಿಕ ಅವರು ಮ್ಯಾರಥಾನ್ ಓಟಕ್ಕೆ ಇಳಿದರು. ಇವರಿಗೆ 89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಅವರು ಕುಗ್ಗ ಹೋಗಿದ್ದರು. ಬಳಿಕ ಅವರು ಖಿನ್ನತೆ ವಿರುದ್ಧ ಹೋರಾಡಲು ಆರಂಭಿಸಿದ್ದರು. ಮ್ಯಾರಥಾನ್​ಗೆ ಸೇರಲು ನಿರ್ಧರಿಸಿದ್ದರು.ಅವರ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು.

ಇಲ್ಲಿಯವರೆಗೆ, ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರು ಪತ್ತೆಯಾಗಿಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ ಅವರು ಫೌಜಾ ಸಿಂಗ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ