AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ ಮಾಡಿರಲಿಲ್ಲ.

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು
ಬಾಲಕಿImage Credit source: NDTV
ನಯನಾ ರಾಜೀವ್
|

Updated on: Mar 24, 2026 | 2:33 PM

Share

ಮುಂಬೈ, ಮಾರ್ಚ್​ 24: ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು.

ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ ಮಾಡಿರಲಿಲ್ಲ.

ಆದರೆ ಕೆಲವು ದಿನಗಳ ಹಿಂದೆ ಕಶಿಶ್ ಆರೋಗ್ಯ ಹದಗೆಟ್ಟಿತ್ತು, ಊಟ ಮಾಡುವುದನ್ನು, ಕುಡಿಯುವುದನ್ನು ಕೂಡ ಬಿಟ್ಟಿದ್ದಳು, ಕಣ್ಣುಗಳು ಕೆಂಪಾಗಿದ್ದವು. ಆಕೆಯ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆಕೆಯ ಕುಟುಂಬವು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಕಸ್ತೂರಬಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಸೋಮವಾರ(ಮಾರ್ಚ್​ 23)ರಂದು ಆಕೆ ಕೊನೆಯುಸಿರೆಳೆದಿದ್ದಾಳೆ.

ಮತ್ತಷ್ಟು ಓದಿ: ನಾಯಿ ಕಡಿತ: ರೇಬಿಸ್​ ರೋಗದಿಂದ ಬೆಂಗಳೂರಿನಲ್ಲಿ 17 ಜನರ ಸಾವು

ಆಕೆಯ ಸಾವಿನ ಬಳಿಕ ಪುರಸಭೆಯು ಅವರ ಕುಟುಂಬ ಸದಸ್ಯರು ಮತ್ತು ಅವರೊಂದಿಗೆ ಸಂಪರ್ಕಕ್ಕೆ ಬಂದ ನೆರೆಹೊರೆಯವರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ನಾಯಿ ಅಥವಾ ಬೆಕ್ಕುಗಳಿಂದ ಕಚ್ಚುವಿಕೆ ಅಥವಾ ಸಣ್ಣ ಗೀರುಗಳನ್ನು ಸಹ ಜನರು ನಿರ್ಲಕ್ಷಿಸಬಾರದು ಮತ್ತು ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ