ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಇಲ್ಲದೆ ಅಪೂರ್ಣ ಅನಿಸುತ್ತಿದೆ: ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದ ಜನರಿಂದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳಲಾಗಿದೆ. ರಾಜ್ಯ ಸ್ಥಾನಮಾನವನ್ನು ಸಂಪೂರ್ಣವಾಗಿ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟವನ್ನು ಮುಂದುವರೆಸುವ ನಮ್ಮ ಪ್ರತಿಜ್ಞೆಯನ್ನು ನಾವು ಇಂದು ನವೀಕರಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.
ದೆಹಲಿ ಅಕ್ಟೋಬರ್ 16: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಷನಲ್ ಕಾನ್ಫರೆನ್ಸ್ (NC) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ (Omar Abdullah)ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಸಂದೇಶದಲ್ಲಿ ರಾಹುಲ್ ಗಾಂಧಿ 2019 ರಲ್ಲಿ ಹಿಂಪಡೆಯಲಾದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಬೇಡಿಕೆಯನ್ನು ಗಾಂಧಿ ಪುನರುಚ್ಚರಿಸಿದ್ದಾರೆ.
“ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅಭಿನಂದನೆಗಳು. ಆದರೆ, ರಾಜ್ಯ ಸ್ಥಾನಮಾನ ಇಲ್ಲದ ಸರ್ಕಾರ ರಚನೆಯು ಇಂದು ಅಪೂರ್ಣವಾಗಿದೆ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ಜನರಿಂದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳಲಾಗಿದೆ. ರಾಜ್ಯ ಸ್ಥಾನಮಾನವನ್ನು ಸಂಪೂರ್ಣವಾಗಿ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟವನ್ನು ಮುಂದುವರೆಸುವ ನಮ್ಮ ಪ್ರತಿಜ್ಞೆಯನ್ನು ನಾವು ಇಂದು ನವೀಕರಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್
Congratulations to CM Omar Abdullah and to the people of Jammu and Kashmir.
However, government formation without statehood felt incomplete today.
Democracy was snatched from the people of Jammu and Kashmir, and today we renew our pledge to continue our fight until statehood…
— Rahul Gandhi (@RahulGandhi) October 16, 2024
ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ಲಾ ,ತುಂಬಾ ಧನ್ಯವಾದಗಳು ರಾಹುಲ್ ಗಾಂಧಿ. ಇಂದು ನಮ್ಮೊಂದಿಗೆ ಸೇರಿದ್ದಕ್ಕಾಗಿ ಧನ್ಯವಾದಗಳು. ನಮ್ಮ ರಾಜ್ಯ ಸ್ಥಾನಮಾನವನ್ನು ಮರಳಿ ಪಡೆಯಲು ನಾವು ಕೆಲಸ ಮಾಡುತ್ತಿರುವಾಗ ಜಮ್ಮು ಮತ್ತು ಕಾಶ್ಮೀರದ ಜನರು ನಿಮ್ಮ ನಿರಂತರ ಬೆಂಬಲಕ್ಕಾಗಿ ನಿಮ್ಮ ಕಡೆಗೆ ನೋಡುತ್ತಾರೆ. ಇಂದು ಪ್ರಿಯಾಂಕಾ ಗಾಂಧಿಯವರೊಂದಿಗೆ ನಿಮ್ಮ ಉಪಸ್ಥಿತಿಯು ನಮಗೆ ಸಾಕಷ್ಟು ಉತ್ತೇಜನವನ್ನು ನೀಡಿತು. ನಿಮ್ಮಿಬ್ಬರೊಂದಿಗೆ ಸ್ವಲ್ಪ ಸಮಯ ಕಳೆದಿದ್ದು ಕುಟುಂಬಕ್ಕೂ ಸಂತೋಷವಾಯಿತು ಎಂದಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒಮರ್ ಅಬ್ದುಲ್ಲಾ ಮತ್ತು ಅವರ ಹೊಸದಾಗಿ ರಚಿಸಲಾದ ಸಂಪುಟದ ಸದಸ್ಯರಿಗೆ ಎಕ್ಸ್ ನಲ್ಲಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ ಮತ್ತು ಅವರ ಸಂಪುಟದ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು. ನಿಮ್ಮ ಮತದ ಬಲದಿಂದ ನ್ಯಾಯ ಮತ್ತು ಪ್ರಜಾಪ್ರಭುತ್ವದ ಧ್ವನಿ ಎತ್ತಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನತೆಗೆ ಧನ್ಯವಾದಗಳು. ಭವಿಷ್ಯಕ್ಕಾಗಿ ಶುಭಾಶಯಗಳು, ”ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
“ಇಂಡಿಯಾ’ ಸಮ್ಮಿಶ್ರ ಸರ್ಕಾರವು ಜನರ ಬಾಕಿ ಉಳಿದಿರುವ ಹಕ್ಕುಗಳನ್ನು ಪುನಃಸ್ಥಾಪಿಸಲು ಮತ್ತು ಅದರ ಎಲ್ಲಾ ಭರವಸೆಗಳು ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸಲು ಸಂಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ. ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣ ವಚನ ಬೋಧಿಸಿದ್ದು ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಯನ್ನು ಗುರುತಿಸುತ್ತದೆ. ಆರ್ಟಿಕಲ್ 370 ರದ್ದತಿಯ ನಂತರ ಕೇಂದ್ರಾಡಳಿತ ಪ್ರದೇಶವಾಗಿ ಮರುಸಂಘಟನೆಯಾದ ನಂತರ ಅವರು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಚುನಾಯಿತ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಸಿಪಿಐ(ಎಂ)ನ ಪ್ರಕಾಶ್ ಕಾರಟ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಸಂಪುಟದಲ್ಲಿ ಕಾಂಗ್ರೆಸ್ ಶಾಸಕರಿಲ್ಲ
ಒಮರ್ ಅಬ್ದುಲ್ಲಾ ಅವರ ಹೊಸ ಕ್ಯಾಬಿನೆಟ್ ಐವರು ಸಚಿವರನ್ನು ಒಳಗೊಂಡಿದೆ, ಜಮ್ಮುವಿನ ಸುರೀಂದರ್ ಚೌಧರಿ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ತಮ್ಮ ಸಂಪುಟದಲ್ಲಿ ಯಾವುದೇ ಕಾಂಗ್ರೆಸ್ ಶಾಸಕರನ್ನು ಸೇರಿಸಿಕೊಳ್ಳದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಒಮರ್ ಅಬ್ದುಲ್ಲಾ, ರಾಷ್ಟ್ರೀಯ ಪಕ್ಷವು ಸಂಪುಟದಿಂದ ಹೊರಗುಳಿದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: Omar Abdullah Oath Taking: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ
ಅದನ್ನು ಕಾಂಗ್ರೆಸ್ ನಿರ್ಧರಿಸುತ್ತದೆ. ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ಮುಖ್ಯವಾಗಿ ಏಕಸದಸ್ಯ ಭವನವನ್ನು ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಿ, ನಮಗೆ ಮೇಲ್ಮನೆ ಇಲ್ಲ. ಆದ್ದರಿಂದ, ಸರ್ಕಾರದ ಗಾತ್ರವನ್ನು ತೀವ್ರವಾಗಿ ನಿರ್ಬಂಧಿಸಲಾಗಿದೆ. ನೀವು 40 ಅಥವಾ 45 ಮಂತ್ರಿಗಳನ್ನು ನೋಡುವ ದಿನಗಳು ಕಳೆದುಹೋಗಿವೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ