AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheetah Death: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹೆಣ್ಣು ಚೀತಾ ಧಾತ್ರಿ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿವೆ. ಆಫ್ರಿಕಾದಿಂದ ತಂದ ಕೆಲವು ಹೆಣ್ಣು ಚಿರತೆಗಳಲ್ಲಿ ಧಾತ್ರಿ ಶವವಾಗಿ ಪತ್ತೆಯಾಗಿದೆ ಎಂದು ಬುಧವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Cheetah Death: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹೆಣ್ಣು ಚೀತಾ ಧಾತ್ರಿ ಸಾವು
ಚೀತಾ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 02, 2023 | 2:13 PM

Share

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿವೆ. ಆಫ್ರಿಕಾದಿಂದ ತಂದ ಕೆಲವು ಹೆಣ್ಣು ಚಿರತೆಗಳಲ್ಲಿ ಧಾತ್ರಿ ಕೂಡ ಒಂದು ಅದು  ಕೂಡ ಶವವಾಗಿ ಪತ್ತೆಯಾಗಿದೆ ಎಂದು ಬುಧವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಾಕಿರುವ 14 ಚೀತಾಗಳು (7 ಗಂಡು, 6 ಹೆಣ್ಣು ಮತ್ತು ಒಂದು ಮರಿ) ಆರೋಗ್ಯವಾಗಿವೆ ಎಂದು ಹೇಳಿಕೆ ತಿಳಿಸಿದೆ. ಕುನೋ ವನ್ಯಜೀವಿ ವೈದ್ಯರ ತಂಡ ಮತ್ತು ನಮೀಬಿಯಾದ ತಜ್ಞರು ಚೀತಾಗಳ ಆರೋಗ್ಯವನ್ನು ನಿರಂತರವಾಗಿ ಪರೀಕ್ಷಿಸುತ್ತಿದ್ದಾರೆ.

ಈ ಹಿಂದೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳು ಉಳಿಯುತ್ತವೆ ಎಂದು ಹೇಳಿದ್ದರು. ಅಂತಾರಾಷ್ಟ್ರೀಯ ತಜ್ಞರು ಸೇರಿದಂತೆ ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದರು. ನಮ್ಮ ತಂಡ ಅಲ್ಲಿಗೆ ಭೇಟಿ ನೀಡಲಿದೆ. ಚೀತಾಗಳನ್ನು ಸ್ಥಳಾಂತರಿಸಲಾಗುವುದಿಲ್ಲ ಮತ್ತು ಕುನೋದಲ್ಲಿಯೇ ಇರುತ್ತದೆ.

ಮತ್ತಷ್ಟು ಓದಿ: ಕುನೋ ಉದ್ಯಾನವನದಲ್ಲಿ ಗಂಡು ಚೀತಾ ಸಾವು; 4 ತಿಂಗಳಲ್ಲಿ ಸತ್ತಿದ್ದು 7 ಚೀತಾ

ಕಳೆದ ಎರಡು ದಿನಗಳಿಂದ ಈ ಚೀತಾವಿರುವ ಸ್ಥಳ ಪತ್ತೆಯಾಗಿರಲಿಲ್ಲ, ಕುನೋದಲ್ಲಿ ಇಲ್ಲಿಯವರೆಗೆ 8 ಚೀತಾಗಳು ಸಾವನ್ನಪ್ಪಿವೆ. 14 ಚೀತಾಗಳು ಹಾಗೂ ಒಂದು ಮರಿ ಜೀವಂತವಾಗಿದ್ದು, ಅದರಲ್ಲಿ ಒಂದು ಚೀತಾ ನಿರ್ವಾ ಅರಣ್ಯದಲ್ಲಿದೆ.

ಕುನೋ ಪ್ರಕಾರ, ಕಾಡಿನಲ್ಲಿ ಹೊರಗೆ ತಿರುಗುತ್ತಿರುವ 2 ಹೆಣ್ಣು ಚೀತಾಗಳನ್ನು ನಮೀಬಿಯಾದ ತಜ್ಞರು ಮತ್ತು ಕುನೋ ವನ್ಯಜೀವಿ ವೈದ್ಯರು ಮತ್ತು ನಿರ್ವಹಣಾ ತಂಡವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ