AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಓಲಾ ಮತ್ತು ಉಬರ್‌ ರೀತಿ ಸಹಕಾರಿ ಟ್ಯಾಕ್ಸಿ ಸೇವೆ ಮತ್ತು ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಟ್ಯಾಕ್ಸಿ ಸೇವೆಯ ಲಾಭ ಚಾಲಕರಿಗೆ ನೇರವಾಗಿ ಹೋಗುತ್ತದೆ ಎಂದು ಅವರು ಹೇಳಿದ್ದಾರೆ. ಗುಜರಾತ್‌ನಲ್ಲಿ ಸ್ಥಾಪನೆಯಾಗುವ ಈ ವಿಶ್ವವಿದ್ಯಾಲಯವು ದೇಶಾದ್ಯಂತ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಕಾರಣವಾಗಲಿದೆ.

ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ
ಕೇಂದ್ರ ಸಚಿವ ಅಮಿತ್ ಶಾ
ವಿವೇಕ ಬಿರಾದಾರ
|

Updated on: Mar 26, 2025 | 11:00 PM

Share

ನವದೆಹಲಿ, ಮಾರ್ಚ್​ 26: ಓಲಾ ಮತ್ತು ಊಬರ್​ ರೀತಿ ಸಹಕಾರಿ ಟ್ಯಾಕ್ಸಿಯನ್ನು (Cooperative taxi) ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಸಂಸತ್ತನಲ್ಲಿ ಹೇಳಿದರು. ಲೋಕಸಭೆಯಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯ ಮೇಲಿನ ಚರ್ಚೆಗೆ ಬುಧವಾರ ಉತ್ತರಿಸಿದ ಅವರು, ಈ ಸಹಕಾರಿ ಟ್ಯಾಕ್ಸಿ ವೇದಿಕೆಯಿಂದ ಬರುವ ಲಾಭವು ಯಾವುದೇ ಶ್ರೀಮಂತ ವ್ಯಕ್ತಿಗೆ ಹೋಗುವುದಿಲ್ಲ. ಈ ಲಾಭ ನೇರವಾಗಿ ಟ್ಯಾಕ್ಸಿ ಚಾಲಕನಿಗೆ ಹೋಗುತ್ತದೆ ಎಂದು ಸದನಕ್ಕೆ ತಿಳಿಸಿದರು.

ಜೊತೆಗೆ ಸಹಕಾರಿ ವಿಮಾ ಕಂಪನಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಗುಜರಾತ್‌ನಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗುಜರಾತ್ ಸರ್ಕಾರ ಇದಕ್ಕಾಗಿ ನಮಗೆ ಭೂಮಿ ನೀಡಿದೆ. ಗುಜರಾತ್‌ನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿದ್ದರೂ, ಅದರ ಕಾರ್ಯಕ್ಷೇತ್ರ ದೇಶ್ಯಾದ್ಯಂತ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲಿ ಸಹಕಾರಿ ಸಂಸ್ಥೆಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ, ಈ ವಿಶ್ವವಿದ್ಯಾಲಯದಿಂದ ತರಬೇತಿ ಪಡೆದವರ ಅಗತ್ಯ ಸಹಕಾರಿ ಸಂಸ್ಥೆಗಳಿಗೆ ಇದೆ. ವಿಶ್ವವಿದ್ಯಾಲಯವಾದ ನಂತರ ಪದವಿ ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಮಾತ್ರ ಉದ್ಯೋಗ ಸಿಗುತ್ತದೆ. ಈ ವಿಶ್ವವಿದ್ಯಾಲಯದಿಂದಲೇ ನವಯುಗದ ಸಹಕಾರಿ ಸಂಸ್ಕೃತಿ ಆರಂಭವಾಗಲಿದೆ. ಸಹಕಾರಿ ಸಂಸ್ಥೆಗಳ ಅವಶ್ಯಕತೆಗಳಿಗೆ ಅನುಗುಣವಾಗಿ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ವಿನ್ಯಾಸಗೊಳಿಸುವ ಕೆಲಸವನ್ನು ನಾವು ಈಗಾಗಲೇ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ
Image
ವೋಟರ್​ ಐಡಿ, ಆಧಾರ್ ಕಾರ್ಡ್​ ಲಿಂಕ್ ಮಾಡದವರು ಏನು ಮಾಡಬೇಕು?
Image
ಮುಂಬೈ ಏರ್​ಪೋರ್ಟ್​ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
Image
ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರು ಕೂಡ ಸುರಕ್ಷಿತವಾಗಿದ್ದಾರೆಂದರ್ಥ
Image
ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ: PIL ವಜಾ

ಈ ವಿಶ್ವವಿದ್ಯಾಲಯವು ಡಿಪ್ಲೊಮಾದಿಂದ ಪಿಎಚ್‌ಡಿವರೆಗಿನ ಪದವಿ ಕೋರ್ಸ್‌ಗಳನ್ನು ಹೊಂದಿರುತ್ತದೆ. ಈ ವಿಶ್ವವಿದ್ಯಾಲಯದ ಸ್ಥಾಪನೆಯು ಸಹಕಾರ ಸಂಘಗಳನ್ನು ವಿಸ್ತರಿಸುತ್ತದೆ ಮತ್ತು ತಳಮಟ್ಟದಲ್ಲಿ ಸಹಕಾರಿ ಸಂಸ್ಥೆಗಳನ್ನು ಬಲಪಡಿಸಲು ಅನುಕೂಲವಾಗುತ್ತದೆ. ಇದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತದೆ ಮತ್ತು ಈ ವಿಶ್ವವಿದ್ಯಾಲಯವು ದೇಶಕ್ಕೆ ಉತ್ತಮ ಸಹಕಾರಿ ಕೆಲಸಗಾರರನ್ನು ಒದಗಿಸುತ್ತದೆ ಎಂದು ಹೇಳಿದರು.

ಇದನ್ನು ಸೊಸೈಟಿ ನೋಂದಣಿ ಕಾಯ್ದೆಯಡಿ ನೋಂದಾಯಿಸಲಾಗುವುದು ಮತ್ತು ದೇಶದ ಮೊದಲ ಸಹಕಾರಿ ವಿಶ್ವವಿದ್ಯಾಲಯವಾಗಲಿದೆ ಎಂದರು. ಈ ವೇಳೆ, ಸಹಕಾರ ಸಚಿವಾಲಯದ ರಚನೆ ಮತ್ತು ಆ ನಂತರ ಸಚಿವಾಲಯ ಮಾಡಿದ ಕಾರ್ಯಗಳನ್ನು ಸಚಿವ ಅಮಿತ್ ಶಾ ವಿವರಿಸಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!