AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಗಂಡಸರ ಜಗಳ; ಇದು ಅಗ್ಗದ WWE ಎಂದ ನೆಟಿಜನ್​​ಗಳು

ದೆಹಲಿ ಮೆಟ್ರೋದಲ್ಲಿ ಡ್ಯಾನ್ಸ್, ಸ್ನಾನ, ಕಿಸ್ಸಿಂಗ್, ಮುದ್ದಾಟ, ಪ್ರಣಯದಾಟ ಹೀಗೆ ಹಲವಾರು ವಿಡಿಯೊಗಳು ವೈರಲ್ ಆಗಿವೆ. ಇದೀಗ ಸೀಟಿಗಾಗಿ ಇಬ್ಬರು ಗಂಡಸರು ಜಗಳಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದೆ. ಈ ಇಬ್ಬರು ಗಂಡಸರು ಕೆನ್ನೆಗೆ ಹೊಡೆದು, ಗುದ್ದಿ, ಪರಸ್ಪರ ತಳ್ಳುತ್ತಿರುವುದು, ಸಹ ಪ್ರಯಾಣಿಕರು ಜಗಳ ತಡೆಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಗಂಡಸರ ಜಗಳ; ಇದು ಅಗ್ಗದ WWE ಎಂದ ನೆಟಿಜನ್​​ಗಳು
ದೆಹಲಿ ಮೆಟ್ರೋ
ರಶ್ಮಿ ಕಲ್ಲಕಟ್ಟ
|

Updated on: Dec 06, 2023 | 2:36 PM

Share

ದೆಹಲಿ ಡಿಸೆಂಬರ್ 06: ದೆಹಲಿ ಮೆಟ್ರೋದಲ್ಲಿ (Delhi Metro) ಇಬ್ಬರು ವ್ಯಕ್ತಿಗಳ ನಡುವಿನ ಹೊಡೆದಾಟದ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social media) ವೈರಲ್ ಆಗಿದ್ದು, ಪ್ರಯಾಣಿಕರು ಆಘಾತ ಮತ್ತು ಆತಂಕಕ್ಕೊಳಗಾಗಿದ್ದಾರೆ. ಈ ವಿಡಿಯೋವನ್ನು ಅಭಿಜೀತ್ ರಾಯ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಕ್ಯಾಮೆರಾದಲ್ಲಿ ಸೆರೆಹಿಡಿದು ಪೋಸ್ಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇಬ್ಬರು ಗಂಡಸರು ಪರಸ್ಪರ ಹೊಡೆದಾಡಿಕೊಳ್ಳುವುದು ಕಾಣಬಹುದು. ಇತರರು ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಇನ್ನು ಕೆಲವರು ಅದನ್ನು ಆನಂದಿಸುತ್ತಾ ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಇದನ್ನು ಸೆರೆ ಹಿಡಿಯುತ್ತಿರುವುದನ್ನು ಕಾಣಬಹುದು.

ದೆಹಲಿ ಮೆಟ್ರೋದಲ್ಲಿ ಒಂದು ಸಾಮಾನ್ಯ ದಿನ. ಸೀಟಿಗಾಗಿ ಇಬ್ಬರು ವ್ಯಕ್ತಿಗಳ ನಡುವೆ ಜಗಳ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಪೋಸ್ಟ್ ಆಗಿದೆ.

ಜಗಳದ ತೀವ್ರತೆಯನ್ನು ಕಂಡು ಜನರು ಆಶ್ಚರ್ಯಚಕಿತರಾಗಿದ್ದಾರೆ. ಆ ರೀತಿಯ ಜನರನ್ನು ಸಬ್ ವೇಯಿಂದ ನಿಷೇಧಿಸಬೇಕು ಎಂದು ಹಲವರು ಹೇಳಿದ್ದಾರೆ. ಒಬ್ಬ ಬಳಕೆದಾರರು “ಅಗ್ಗದ WWE” ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಬೆಂಗಳೂರು ಮೆಟ್ರೋದಲ್ಲಿ ಇಂತಹ ವಿಡಿಯೊಗಳು ಇಲ್ಲ ಎಂಬುದರ ಬಗ್ಗೆ ಮಾತನಾಡುತ್ತಾ, “ನಮ್ಮ ಬೆಂಗಳೂರು ಮೆಟ್ರೋದಲ್ಲಿ ಇಂಥದ್ದೆಲ್ಲ ಯಾಕೆ ಕಾಣ ಸಿಗುವುದಿಲ್ಲ ಎಂದು ಕೇಳಿದ್ದಾರೆ.

ಮತ್ತೊಬ್ಬ ಬಳಕೆದಾರರು, ಇತ್ತೀಚೆಗೆ ಬಿಡುಗಡೆಯಾದ ಅನಿಮಲ್ ಚಿತ್ರವನ್ನು ಉಲ್ಲೇಖಿಸಿ, “ಅನಿಮಲ್ ದೇಖ್ ಕರ್ ಆಯೆ ಹೋ ಕ್ಯಾ” (ಅನಿಮಲ್ ಸಿನಿಮಾ ನೋಡಿ ಬಂದಿದ್ದೀರಾ) ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ಇಲ್ಲಿ ಟಿಕೆಟ್ ತೆಗೆದುಕೊಂಡರೆ ಉಚಿತವಾಗಿ ಜಗಳವೂ ನೋಡಲು ಸಿಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ: ಬಿಜೆಪಿಯಲ್ಲಿ ಹಲ್​ ಚಲ್ ಬಸನಗೌಡ ಪಾಟೀಲ್ ಯತ್ನಾಳ್

ದೆಹಲಿ ಮೆಟ್ರೋದಲ್ಲಿ ವೈರಲ್ ವಿಡಿಯೊಗಳು ಸಾಮಾನ್ಯ ದೃಶ್ಯವಾಗಿದೆ. ದೆಹಲಿ ಮೆಟ್ರೋದಲ್ಲಿ ಜಗಳದಿಂದ ಹಿಡಿದು ಡ್ಯಾನ್ಸ್, ಕಿಸ್ಸಿಂಗ್, ಪ್ರಣಯದಾಟದ ವಿಡಿಯೊಗಳು ಕೂಡಾ ವೈರಲ್ ಆಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ