Sign In

By signing in or creating an account, you agree with Associated Broadcasting Company's Terms & Conditions and Privacy Policy.

Fight on flight: ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕರ ನಡುವೆ ಹೊಡೆದಾಟ, ವಿಡಿಯೊ ವೈರಲ್

ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಇದೀಗ ಈ ಇಬ್ಬರ ಕಿತ್ತಾಟ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು.

Fight on flight: ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕರ ನಡುವೆ ಹೊಡೆದಾಟ, ವಿಡಿಯೊ ವೈರಲ್
Fight on flight Fight between passengers on Bangkok-Kolkata flightImage Credit source: india today
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 29, 2022 | 12:32 PM

ಥಾಯ್ ಸ್ಮೈಲ್ ಏರ್‌ವೇಸ್ (Thai Smile Airways) ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಇದೀಗ ಈ ಇಬ್ಬರ ಕಿತ್ತಾಟ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು, ಈ ಇಬ್ಬರ ಜಗಳಕ್ಕೆ ವಿಮಾನದಲ್ಲಿದ್ದ ಅನೇಕ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ನಂತರ ವಿಮಾನದ ಸಿಬ್ಬಂದಿಗಳು ಬಂದು ಇಬ್ಬರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಒಬ್ಬ ವ್ಯಕ್ತಿ ಶಾಂತಿ ಸೆ ಬಾತ್ ( ಶಾಂತವಾಗಿ ಮಾತನಾಡಿ) ಎಂದು ಹೇಳುವುದನ್ನು ಕೇಳಬಹುದು, ಆದರೆ ಇನ್ನೊಬ್ಬ ವ್ಯಕ್ತಿ ಹತ್ ನೀಚೆ ಕರ್ (ನಿಮ್ಮ ಕೈಯನ್ನು ಕೆಳಕ್ಕೆ ಇಳಿಸಿ) ಎಂದು ಹೇಳುತ್ತಾರೆ. ಕೆಲವೇ ಸಮಯದ ನಂತರ ಇಬ್ಬರ ನಡುವೆ ಮಾತು ಹೊಡೆದಾಟಕ್ಕೆ ತಿರುಗಿದೆ. ಒಬ್ಬರ ಮೇಲೆ ಒಬ್ಬರು ಕೈ ಮಾಡುತ್ತಾರೆ.

ಈ ವಿಡಿಯೊದಲ್ಲಿ ಸಂಘರ್ಷಕ್ಕೆ ನಿಂತ ವ್ಯಕ್ತಿ ತನ್ನ ಕನ್ನಡಕವನ್ನು ತೆಗೆದು ಇನ್ನೊಬ್ಬ ವ್ಯಕ್ತಿಗೆ ಹೊಡೆಯುತ್ತಾನೆ. ಕನ್ನಡಕ ಹಾಕಿದ್ದ ವ್ಯಕ್ತಿಯ ಸ್ನೇಹಿತರು ಅಲ್ಲಿಗೆ ಬರುತ್ತಾರೆ, ಅವರ ನಡುವೆ ಮಾತು ಜೋರಾಗಿ ನಡೆದು ಅವರು ಕೂಡ ಆ ವ್ಯಕ್ತಿಗೆ ಹೊಡೆಯಲು ಆರಂಭಿಸಿದ್ದಾರೆ. ಹಲ್ಲೆಗೆ ಒಳಾಗದ ವ್ಯಕ್ತಿ ದಾಳಿಯನ್ನು ತಪ್ಪಿಸಲು ಪ್ರಯತ್ನ ಮಾಡುತ್ತಾರೆ. ಈ ಸಮಯದಲ್ಲಿ ವಿಮಾನ ಸಿಬ್ಬಂದಿಗಳು ಕೂಡ ಜಗಳವನ್ನು ತಡೆಯಲು ಮುಂದಾಗುತ್ತಾರೆ. ಆದರೆ ಈ ಕಿತ್ತಾಟ ಅವರ ಕೈಮೀರಿ ಹೋಗಿತ್ತು.

ಇದನ್ನು ಓದಿ:Flight: ನಿಮಗೆ ಅಗ್ಗದ ಬೆಲೆಯಲ್ಲಿ ವಿಮಾನ ಪ್ರಯಾಣ ಮಾಡಬೇಕೆ? ಇಲ್ಲಿವೆ ಟಿಪ್ಸ್

ಈ ಜಗಳವನ್ನು ನಿಲ್ಲಿಸಲು ವಿಮಾನ ಸಿಬ್ಬಂದಿಗಳು ಪ್ರಯತ್ನ ಮಾಡುತ್ತಾರೆ. ಆದರೆ ಜಗಳ ವಿಪರಿತವಾಗಿದ್ದ ಕಾರಣ ಸಹ-ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಜಗಳವನ್ನು ನಿಲ್ಲಿಸುವಂತೆ ಇಬ್ಬರಿಗೂ ಹೇಳುತ್ತಾರೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇಲ್ಲಿಯವರೆಗೆ, ಥಾಯ್ ಸ್ಮೈಲ್ ಏರ್‌ವೇಸ್ ಈ ಸಮಸ್ಯೆ ಬಗ್ಗೆ ಯಾವುದೇ ಪ್ರತಿಕ್ರಿಯಿ ನೀಡಿಲ್ಲ ಮತ್ತು ಈ ಪ್ರಕರಣದ ಬಗ್ಗೆ ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ತಿಳಿಸಿಲ್ಲ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ