AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಾ ನಾನು ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ, ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆ

ನಿರಂತರ ಕಿರುಕುಳದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್​​ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ದಂಪತಿಗೆ ಒಬ್ಬ ಮಗನಿದ್ದಾನೆ.

ಅಮ್ಮಾ ನಾನು ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ, ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆ
ಮಹಿಳೆ ಸಾವು Image Credit source: India Today
ನಯನಾ ರಾಜೀವ್
|

Updated on: Jul 31, 2025 | 2:27 PM

Share

ತ್ರಿಶೂರ್, ಜುಲೈ 31: ಅಮ್ಮಾ ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ(Pregnant) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್​​ನಲ್ಲಿ ನಡೆದಿದೆ.ತ್ರಿಶೂರ್​ ಜಿಲ್ಲೆಯ ವೆಲ್ಲಂಗುಲರ್​​ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ ಎಂಬ  ಮಹಿಳೆ ನೇಣಿಗೆ ಶರಣಾಗಿದ್ದಾರೆ.

ಜುಲೈ 29ರಂದು ಘಟನೆ ನಡೆದಿದೆ. ಇರಿಂಜಲಕುಡ ಪೊಲೀಸರು ಆಕೆಯ ಪತಿ ನೌಫಲ್ ಮತ್ತು ಅತ್ತೆ ರಮ್ಲಾ ಅವರನ್ನು ಬಂಧಿಸಿದ್ದು, ಇಬ್ಬರನ್ನೂ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಿತ್ಯವೂ ಅತ್ತೆ ಮನೆಯಲ್ಲಿ ಮಹಿಳೆ ನರಕ ಅನುಭವಿಸುತ್ತಿದ್ದರು. ತಾಯಿಗೆ ಕಳುಹಿಸಿರುವ ಸಂದೇಶದಲ್ಲಿ ಅತ್ತೆ ನಿತ್ಯವೂ ತನ್ನ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಬರೆಸಿದ್ದರು.

ತನ್ನ ತಾಯಿಗೆ ಕಳುಹಿಸಿದ ಸಂದೇಶಗಳಲ್ಲಿ, ಫಸೀಲಾ ತಾನು ಎರಡನೇ ಬಾರಿಗೆ ಗರ್ಭಿಣಿಯಾಗಿದ್ದೇನೆ ಮತ್ತು ತನ್ನ ಪತಿ ತನ್ನ ಹೊಟ್ಟೆಗೆ ಹಲವು ಬಾರಿ ಒದ್ದಿದ್ದಾನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ನನ್ನ ಒಂದು ಕೈ ಮುರಿದಿದ್ದಾನೆ.ಕೊನೆಯ ಸಂದೇಶಗಳಲ್ಲಿ ಒಂದರಲ್ಲಿ, ಫಸೀಲಾ ತನ್ನ ತಾಯಿಗೆ ನಾನು ಸಾಯುತ್ತೇನೆ, ಇಲ್ಲದಿದ್ದರೆ ಅವರು ನನ್ನನ್ನು ಕೊಲ್ಲುತ್ತಾರೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ಸೆಂಟ್ರಲ್ ಇಂಟಲಿಜೆನ್ಸ್​​ ಸಿಬ್ಬಂದಿ ಆತ್ಮಹತ್ಯೆ, ಮಗನ ತಿಥಿ ದಿನವೇ ತಾಯಿ ನೇಣಿಗೆ ಶರಣು!

ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್​​ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ದಂಪತಿಗೆ ಒಬ್ಬ ಮಗನಿದ್ದಾನೆ.

ಕೇರಳದ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಕೊಲ್ಲಂನ 29ವರ್ಷದ ಅಥುಲ್ಯಾ ಎಂಬ ಮಹಿಳೆ ಜುಲೈ 21ರಂದು ಯುನೈಟೆಡ್ ಅರಬ್ ಎಮಿರೇಟ್ಸ್​​ನ ಅಪಾರ್​ಟ್​ಮೆಂಟ್​​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಕೆಯ ಕುಟುಂಬವು ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಇದು ಆತ್ಮಹತ್ಯೆಯಲ್ಲ ಎಂದು ಆರೋಪಿಸಿದೆ. ಕೊಲ್ಲಂ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅವರ ಕುಟುಂಬದ ಪ್ರಕಾರ, 2014ರಲ್ಲಿ ಮದುವೆಯಾದಾಗಿನಿಂದ ಅಥುಲ್ಯಾ ವರದಕ್ಷಿಣೆ ಬೇಡಿಕೆ ಇಟ್ಟು ನಿತ್ಯ ದೈಹಿಕ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸುತ್ತಿದ್ದರು.

ಮತ್ತೊಂದು ಪ್ರಕರಣದಲ್ಲಿ ಜುಲೈ 8ರಂದು ಶಾರ್ಜಾದಲ್ಲಿರುವ ತಮ್ಮ ಫ್ಲಾಟ್​ನಲ್ಲಿ 32 ವರ್ಷದ ವಿಪಂಚಿಕಾ ಮಣಿಯನ್ ಮತ್ತು ಅವರ ಒಂದೂವರೆ ವರ್ಷದ ಮಗಳು ಶವವಾಗಿ ಪತ್ತೆಯಾಗಿದ್ದರು. ವಿಪಂಚಿಕಾ ಬರೆದ ಆತ್ಮಹತ್ಯಾ ಪತ್ರದಲ್ಲಿ ವರ್ಷಗಳ ಕಾಲ ವರದಕ್ಷಿಣೆ ಕಿರುಕುಳ ಅನುಭವಿಸಿರುವುದಾಗಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್