ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣ; ಆನಂದ್ ಗಿರಿ ವಿರುದ್ಧ ಎಫ್ಐಆರ್ ದಾಖಲು

ಸಿಎಂ ಯೋಗಿ ಆದಿತ್ಯನಾಥ್ ಮಹಾಂತ ನರೇಂದ್ರ ಗಿರಿ ಅಂತಿಮ ದರ್ಶನ ಪಡೆದಿದ್ದಾರೆ. ಬಾಗಂಬರಿ ಮಠದಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ.

ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣ; ಆನಂದ್ ಗಿರಿ ವಿರುದ್ಧ ಎಫ್ಐಆರ್ ದಾಖಲು
ಮಹಾಂತಾ ನರೇಂದ್ರ ಗಿರಿ
Follow us
TV9 Web
| Updated By: ಆಯೇಷಾ ಬಾನು

Updated on:Sep 21, 2021 | 11:59 AM

ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಅಮರ್ ಗಿರಿ ಪವನ್ ಮಹಾರಾಜ್ ದೂರು ಆಧರಿಸಿ ಆನಂದ್ ಗಿರಿ ವಿರುದ್ಧ ಐಪಿಸಿ ಸೆಕ್ಷನ್ 306ರಡಿ ಎಫ್ಐಆರ್ ದಾಖಲಾಗಿದೆ.

ಇನ್ನು ಮತ್ತೊಂದು ಕಡೆ ಸಿಎಂ ಯೋಗಿ ಆದಿತ್ಯನಾಥ್ ಮಹಾಂತ ನರೇಂದ್ರ ಗಿರಿ ಅಂತಿಮ ದರ್ಶನ ಪಡೆದಿದ್ದಾರೆ. ಬಾಗಂಬರಿ ಮಠದಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ.

ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನರೇಂದ್ರ ಗಿರಿಯವರು ಸಾವಿಗೂ ಮೊದಲು ಒಂದು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಇದೀಗ ಪೊಲೀಸರ ಬಳಿಯಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಮಹಾಂತ ನರೇಂದ್ರ ಗಿರಿಯವರ ಶವ ಅವರ ಪ್ರಯಾಗರಾಜ್ನಲ್ಲಿರುವ ನಿವಾಸದ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದೆ. ಅದು ಆತ್ಮಹತ್ಯೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸೂಸೈಡ್ ನೋಟ್ ಕೂಡ ಬರೆದಿಟ್ಟಿದ್ದು ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ವಿಡಿಯೋವನ್ನೂ ಪರಿಶೀಲನೆ ಮಾಡುತ್ತಿದ್ದಾರೆ. ಸೂಸೈಡ್ ನೋಟ್ನಲ್ಲಿ ಇರುವುದೇ ಬಹುತೇಕ ವಿಡಿಯೋದಲ್ಲೂ ಇರುವುದಾಗಿ ನಿರ್ಭಯ್ ದ್ವಿವೇದಿ ತಿಳಿಸಿದ್ದಾರೆ.

ಆತ್ಮಹತ್ಯೆ ನೋಟ್ ಮತ್ತು ವಿಡಿಯೋ ಎರಡರದಲ್ಲೂ ಮಹಾಂತ ನರೇಂದ್ರ ಗಿರಿಯವರು ಕೆಲವು ಜನರ ಹೆಸರನ್ನು ಉಲ್ಲೇಖಿಸಿ, ನನಗೆ ತುಂಬ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ತುಂಬ ಘನತೆಯಿಂದ ಜೀವನ ನಡೆಸುತ್ತಿದ್ದೇನೆ. ಅವಮಾನಗಳನ್ನು ಸಹಿಸುತ್ತ ಬದುಕಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ನಾನು ನನ್ನ ಜೀವನವನ್ನು ಕೊನೆಗೊಳಿಸಿಕೊಳ್ಳುತ್ತಿದ್ದೇನೆ ಎಂದು ಸೂಸೈಡ್ ಲೆಟರ್ನಲ್ಲಿ ಬರೆದಿದ್ದಾರೆ. ಸುಮಾರು 7-8 ಪುಟಗಳ ಸೂಸೈಡ್ ನೋಟ್ ಬರೆದಿರುವ ಅವರು, ತಮ್ಮ ಮಾನಸಿಕ ನೋವಿಗೆ ಅನೇಕ ಕಾರಣಗಳು ಇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾವಿಗೂ ಮುನ್ನ ವಿಡಿಯೋ ಮಾಡಿದ್ದ ಮಹಾಂತ ನರೇಂದ್ರ ಗಿರಿ; ಶಿಷ್ಯನನ್ನು ಹರಿದ್ವಾರದಲ್ಲಿ ವಶಕ್ಕೆ ಪಡೆದ ಪೊಲೀಸರು

Published On - 11:57 am, Tue, 21 September 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್