AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಸಿಂಹಾನಂದ ಹೇಳಿಕೆ ಬಗ್ಗೆ ಟ್ವೀಟ್; ಮೊಹಮ್ಮದ್ ಜುಬೇರ್ ವಿರುದ್ಧ ಎಫ್‌ಐಆರ್

ದಸ್ನಾ ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದಾರೆ ಯತಿ ನರಸಿಂಹಾನಂದ. ಜುಬೇರ್ ಅವರಲ್ಲದೆ, ಇದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರಮುಖ ಮುಸ್ಲಿಂ ಧರ್ಮಗುರು ಅರ್ಷದ್ ಮದ್ನಿ ಅವರ ಹೆಸರೂ ಎಫ್ಐಆರ್ ನಲ್ಲಿದೆ. ದೇವಸ್ಥಾನದ ಹೊರಗೆ ನಡೆದ ಹಿಂಸಾಚಾರವು ಯೋಜಿತ ಸಂಚು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನರಸಿಂಹಾನಂದ ಹೇಳಿಕೆ ಬಗ್ಗೆ ಟ್ವೀಟ್; ಮೊಹಮ್ಮದ್ ಜುಬೇರ್ ವಿರುದ್ಧ ಎಫ್‌ಐಆರ್
ಮೊಹಮ್ಮದ್ ಜುಬೇರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 07, 2024 | 8:18 PM

Share

ದೆಹಲಿ ಅಕ್ಟೋಬರ್ 07: ಪ್ರವಾದಿ ಮುಹಮ್ಮದ್ (Prophet Muhammad) ಬಗ್ಗೆ ಯತಿ ನರಸಿಂಹಾನಂದ ಅವರ ಹೇಳಿಕೆಗಳ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರ ದೂರಿನ ಆಧಾರದ ಮೇಲೆ ಆಲ್ಟ್ ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) ವಿರುದ್ಧ ಯುಪಿ ಪೊಲೀಸರು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ದಸ್ನಾ ದೇವಸ್ಥಾನದ ಹೊರಗಿನ ಹಿಂಸಾಚಾರದ ಎರಡು ದಿನಗಳ ನಂತರ ಘಾಜಿಯಾಬಾದ್‌ನ ವೆಬ್ ಸಿಟಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 7 ರಂದು ಬಿಜೆಪಿ ನಾಯಕ ಡಾ ಉದಿತಾ ತ್ಯಾಗಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ದಸ್ನಾ ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದಾರೆ ಯತಿ ನರಸಿಂಹಾನಂದ. ಜುಬೇರ್ ಅವರಲ್ಲದೆ, ಇದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರಮುಖ ಮುಸ್ಲಿಂ ಧರ್ಮಗುರು ಅರ್ಷದ್ ಮದ್ನಿ ಅವರ ಹೆಸರೂ ಎಫ್ಐಆರ್ ನಲ್ಲಿದೆ. ದೇವಸ್ಥಾನದ ಹೊರಗೆ ನಡೆದ ಹಿಂಸಾಚಾರವು ಯೋಜಿತ ಸಂಚು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜುಬೈರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196, 228, 299, 356(3), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. As expected. FIR registered against me. https://t.co/KeGQnI2G5y

ಕಳೆದ ವಾರ, ಸಬ್ ಇನ್ಸ್‌ಪೆಕ್ಟರ್ ತ್ರಿವೇಂದ್ರ ಸಿಂಗ್ ಅವರ ದೂರಿನ ಆಧಾರದ ಮೇಲೆ ಗಾಜಿಯಾಬಾದ್ ಪೊಲೀಸರು ಯತಿ ಅವರ ಹೇಳಿಕೆಗಳಿಗಾಗಿ ಪ್ರಕರಣ ದಾಖಲಿಸಿದ್ದರು. ಯತಿ ಅವರನ್ನು ಬಂಧಿಸಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿದ್ದರೂ  ಅವರನ್ನು ಇನ್ನೂ ಬಂಧಿಸಲಾಗಿಲ್ಲ.

ಸೆಪ್ಟೆಂಬರ್ 29 ರಂದು, ನರಸಿಂಹಾನಂದ ಅವರು ಗಾಜಿಯಾಬಾದ್‌ನ ಲೋಹಿಯಾ ನಗರದಲ್ಲಿರುವ ಹಿಂದಿ ಭವನದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು,ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಜನವರಿಯಿಂದ 194 ನಕ್ಸಲರನ್ನು ಸದೆಬಡಿಯಲಾಗಿದೆ, 801 ಮಂದಿ ಬಂಧನ: ಅಮಿತ್ ಶಾ

ಜುಬೈರ್ ವಿರುದ್ಧ ಇದು ಮೊದಲ ಎಫ್‌ಐಆರ್ ಅಲ್ಲ. ಆನ್‌ಲೈನ್‌ನಲ್ಲಿ ದ್ವೇಷ ಭಾಷಣವನ್ನು ಎತ್ತಿ ತೋರಿಸಿದ್ದಕ್ಕೆ ಇದಕ್ಕಿಂತ ಮುಂಚೆಯೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Mon, 7 October 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು