AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ವಿವಾದ; ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಆಕ್ರೋಶ ವ್ಯಕ್ತವಾಗಿತ್ತು.

ಸನಾತನ ಧರ್ಮ ವಿವಾದ; ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು
ಉದಯನಿಧಿ ಸ್ಟಾಲಿನ್
ಸುಷ್ಮಾ ಚಕ್ರೆ
|

Updated on: Sep 06, 2023 | 11:03 AM

Share

ಬೆಂಗಳೂರು: ಸನಾತನ ಧರ್ಮವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದ್ದ ಡಿಎಂಕೆ ನಾಯಕ ಹಾಗೂ ತಮಿಳುನಾಡು ಯುವಜನ ಕಲ್ಯಾಣ ಇಲಾಖೆ ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ವಿರುದ್ಧ ದೇಶಾದ್ಯಂತಹ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಗನಾಗಿರುವ ಉದಯನಿಧಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇದೀಗ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್ ದಾಖಲಾಗಿದೆ.

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ‘ಸನಾತನ ಧರ್ಮ’ ಹೇಳಿಕೆಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ’ ಹೇಳಿಕೆ ಖಂಡಿಸಿ ಸಿಜೆಐಗೆ ಪತ್ರ ಬರೆದ 262 ಗಣ್ಯರು

ಏನಿದು ವಿವಾದ?: ಭಾನುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಮಗ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಕೊರೋನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿ ಮಾತನಾಡಿದ್ದರು. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ, ಕೊರೊನಾವೈರಸ್ ಇದ್ದಂತೆ. ಸನಾತನ ಧರ್ಮವನ್ನು ಕೇವಲ ವಿರೋಧಿಸಿದರಷ್ಟೇ ಸಾಲದು. ಅದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು.

ಉದಯ್ ಸ್ಟಾಲಿನ್ ಅವರ ಈ ಹೇಳಿಕೆಗೆ ದೇಶಾದ್ಯಂತ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವು ನಾಯಕರು ಇದು ನರಮೇಧದ ಕರೆ ಎಂದು ಆರೋಪಿಸಿದ್ದರೆ, ಇನ್ನು ಕೆಲವರು ಉದಯನಿಧಿ ಸ್ಟಾಲಿನ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮಕ್ಕೆ ಹುಟ್ಟಿಲ್ಲ ಅಮ್ಮ, ಅಪ್ಪನಿಗೆ ಹುಟ್ಟಿದ್ದೇನೆ ಎಂದೆ; ಗೌರಿನೆನಪು ಕಾರ್ಯಕ್ರಮದಲ್ಲಿ ಪ್ರಕಾಶ್​ ರೈ

ಇದರ ಬೆನ್ನಲ್ಲೇ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ನಿರ್ಮೂಲನೆ ಕುರಿತು ನೀಡಿದ್ದ ಹೇಳಿಕೆಗೆ ಕರ್ನಾಟಕದ ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲ ವ್ಯಕ್ತಪಡಿಸಿದ್ದರು. ಮನುಷ್ಯನ ಘನತೆಯನ್ನು ಎತ್ತಿಹಿಡಿಯದ, ಸಮಾಜದಲ್ಲಿ ಸಮಾನತೆಯನ್ನು ಸಾರದ ಯಾವುದೇ ಒಂದು ಧರ್ಮ ಧರ್ಮವೇ ಅಲ್ಲ. ಸಮಾನ ಹಕ್ಕುಗಳನ್ನು ನೀಡದ ಮತ್ತು ಮನುಷ್ಯರನ್ನು ಮನುಷ್ಯರಂತೆ ನಡೆಸಿಕೊಳ್ಳದೆ ಕೀಳಾಗಿ ಕಾಣುವ ಧರ್ಮ ರೋಗದಷ್ಟೇ ಕೆಟ್ಟದ್ದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.

ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇರುವುದಿಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುವುದೋ ಅದು ಧರ್ಮವೇ ಅಲ್ಲ. ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ. ಬುದ್ಧ, ಬಸವಣ್ಣ ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ಪ್ರಿಯಾಂಕ್ ಖರ್ಗೆ ಉದಯನಿಧಿಗೆ ಬೆಂಬಲ ಸೂಚಿಸಿದ್ದರು.

ಕರ್ನಾಟಕಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!