ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಕೇಜ್ರಿವಾಲ್ ಮನೆಯ ಹೊರಗೆ ಪಟಾಕಿ ಸಿಡಿಸಿದ್ದಕ್ಕೆ ಎಫ್‌ಐಆರ್

ಚಳಿಗಾಲದ ವಾಯುಮಾಲಿನ್ಯವನ್ನು ನಿಯಂತ್ರಿಸಲು ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ದೆಹಲಿ ಸರ್ಕಾರ ಈ ಹಿಂದೆ ನಿಷೇಧಿಸಿತ್ತು. ನಿಷೇಧವನ್ನು ಉಲ್ಲಂಘಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಆದೇಶಗಳಿಗೆ ಅವಿಧೇಯತೆ) ಅಡಿಯಲ್ಲಿ ಪ್ರಕರಣವನ್ನು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಕೇಜ್ರಿವಾಲ್ ಮನೆಯ ಹೊರಗೆ ಪಟಾಕಿ ಸಿಡಿಸಿದ್ದಕ್ಕೆ ಎಫ್‌ಐಆರ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:Sep 14, 2024 | 6:06 PM

ದೆಹಲಿ ಸೆಪ್ಟೆಂಬರ್ 14: ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕೆ ದೆಹಲಿ ಪೊಲೀಸರು (Delhi Police) ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಿಬಿಐನ ದೆಹಲಿ ಅಬಕಾರಿ ನೀತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಐದು ತಿಂಗಳ ಜೈಲಿನಲ್ಲಿ ಕಳೆದ ನಂತರ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪಟಾಕಿ ಸಿಡಿಸಿದ್ದಕ್ಕೆ ಎಫ್‌ಐಆರ್‌ ಏಕೆ?

ಚಳಿಗಾಲದ ವಾಯುಮಾಲಿನ್ಯವನ್ನು ನಿಯಂತ್ರಿಸಲು ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ದೆಹಲಿ ಸರ್ಕಾರ ಈ ಹಿಂದೆ ನಿಷೇಧಿಸಿತ್ತು. ನಿಷೇಧವನ್ನು ಉಲ್ಲಂಘಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಆದೇಶಗಳಿಗೆ ಅವಿಧೇಯತೆ) ಅಡಿಯಲ್ಲಿ ಪ್ರಕರಣವನ್ನು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸಿಎಂ ನಿವಾಸದ ಹೊರಗೆ ಪಟಾಕಿ ಸಿಡಿಸಲಾಯಿತು.

ಸುಪ್ರೀಂಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದು ಕೆಲವು ಮಿತಿಗಳನ್ನು ವಿಧಿಸಿದೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಜಾಮೀನು ಷರತ್ತುಗಳ ಭಾಗವಾಗಿ ₹ 10 ಲಕ್ಷದ ಶ್ಯೂರಿಟಿ ಬಾಂಡ್ ಸಲ್ಲಿಸಬೇಕು. ದೆಹಲಿ ಅಬಕಾರಿ ನೀತಿ ಪ್ರಕರಣದ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ.

ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಅನುಮತಿಗಳನ್ನು ಪಡೆಯಲು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದರೆ ಅವರು ಅಧಿಕೃತ ದಾಖಲೆಗಳಿಗೆ ಸಹಿ ಹಾಕುವಂತಿಲ್ಲ. ನ್ಯಾಯಾಲಯದಿಂದ ವಿನಾಯಿತಿ ನೀಡದ ಹೊರತು ಅವರು ವಿಚಾರಣೆಗೆ ಹಾಜರಾಗಬೇಕು.

ಇದನ್ನೂ ಓದಿ: ಮೂರು ಕುಟುಂಬಗಳು ಜಮ್ಮು ಕಾಶ್ಮೀರವನ್ನು ನಾಶಪಡಿಸಿದವು: ದೋಡಾದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕೇಜ್ರಿವಾಲ್ ಅವರು ಈ ಷರತ್ತುಗಳನ್ನು ಮಾರ್ಪಡಿಸಲು ಬಯಸಿದರೆ ಅರ್ಜಿಯನ್ನು ಸಲ್ಲಿಸಬೇಕು. ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸುಪ್ರೀಂಕೋರ್ಟ್ ಬದಲಾಯಿಸಬಹುದು ಎಂದು ಅವರ ವಕೀಲ ರಿಷಿಕೇಶ್ ಕುಮಾರ್ ಹೇಳಿದ್ದಾರೆ.

2021-22ರ ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮಾರ್ಚ್ 21, 2024 ರಂದು ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ನಂತರ ಇಡಿ ಕಸ್ಟಡಿಯಲ್ಲಿದ್ದಾಗ ಜೂನ್ 26, 2024 ರಂದು ಅವರನ್ನು ಮತ್ತೆ ಬಂಧಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sat, 14 September 24

ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ