ಮುಂಬೈ: ಮಹಾರಾಷ್ಟ್ರದ ಮುಂಬೈ ಸಮೀಪದ ಥಾಣೆಯ (Thane) ಡೊಂಬಿವ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ (Chemical Factory) ಇಂದು (ಗುರುವಾರ) ಸಂಭವಿಸಿದ ಭಾರೀ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ (Fire Accident) ಕಾಣಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೆಮಿಕಲ್ ಕಾರ್ಖಾನೆಯಲ್ಲಿ 3 ಸ್ಫೋಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ದುರಂತದ ವೇಳೆ ರಾಸಾಯನಿಕ ಫ್ಯಾಕ್ಟರಿಯೊಳಗೆ ಸಿಲುಕಿದ ಸುಮಾರು 8 ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ಇದನ್ನೂ ಓದಿ: Crime News: ಜೈಲಿನಲ್ಲಿ 14 ವರ್ಷದ ಬಾಲಕಿ, ಆತನ ಗಂಡ ಸಾವು; ಕೋಪದಿಂದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಜನ
”ಡೊಂಬಿವಿಲಿ ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ದುರಂತಮಯವಾಗಿದೆ. ಈ ಘಟನೆಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಎನ್‌ಡಿಆರ್‌ಎಫ್, ಟಿಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Fire Accident: ದೆಹಲಿ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ
ಬೆಂಕಿ ನಂದಿಸಲು ಸುಮಾರು 15 ಇಂಜಿನ್‌ಗಳನ್ನು ನಿಯೋಜಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿ ನಂದಿಸಲು 4 ಗಂಟೆಗೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳ ಗಾಜುಗಳು ಒಡೆದು ಹೋಗಿವೆ. ಕಾರು ಶೋರೂಂ ಸೇರಿದಂತೆ ಇನ್ನೆರಡು ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ಇಂದು ಮಧ್ಯಾಹ್ನ 1.40ರ ಸುಮಾರಿಗೆ ಈ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಪ್ರಾಥಮಿಕ ವರದಿಗಳ ಪ್ರಕಾರ, ಈ ಸ್ಫೋಟದಲ್ಲಿ ಹಲವಾರು ವಾಹನಗಳು ಮತ್ತು ಮನೆಗಳು ಹಾನಿಗೊಳಗಾಗಿವೆ ಮತ್ತು ಕನಿಷ್ಠ 7 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ