ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ

|

Updated on: Mar 21, 2025 | 4:47 PM

ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಬಂಗಲೆಗೆ ಬೆಂಕಿ ಬಿದ್ದ ಪರಿಣಾಮ ಅವರ ಮನೆಯಲ್ಲಿ ಭಾರಿ ಪ್ರಮಾಣದ ನಗದು ಇರುವುದು ಬೆಳಕಿಗೆ ಬಂದಿದೆ. ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ನಗದು ಪತ್ತೆಯಾಗಿದೆ.

ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ
Justice Yashwant Verma
Follow us on

ನವದೆಹಲಿ, ಮಾರ್ಚ್ 21: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಇಲ್ಲದಿದ್ದಾಗ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅವರ ಕುಟುಂಬ ಸದಸ್ಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಬೆಂಕಿಯನ್ನು ನಂದಿಸಿದ ನಂತರ, ಅಗ್ನಿಶಾಮಕ ದಳದ ಸಿಬ್ಬಂದಿ ಬಂಗಲೆಯ ವಿವಿಧ ಕೊಠಡಿಗಳಲ್ಲಿ ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದಾರೆ. ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ದೆಹಲಿ ಹೈಕೋರ್ಟ್ ನಿಂದ ಅಲಹಾಬಾದ್ ಹೈಕೋರ್ಟ್ ಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂ ಸಲಹೆ ಮೇರೆಗೆ ಅವರನ್ನು ಅಲಹಾಬಾದ್ ಹೈಕೋರಟ್​​ ಗೆ ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶರು ಮನೆಯಲ್ಲಿ ಇಲ್ಲದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ವೇಳೆ ಕುಟುಂಬಸ್ಥರು ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ್ದರು. ಬೆಂಕಿ ನಂದಿಸಲು ಆಗಮಿಸಿದ ವೇಳೆ ಹಲವು ರೂಂಗಳಲ್ಲಿ ಭಾರಿ ಪ್ರಮಾಣ ನಗದು ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಕೊಲಿಜಿಯಂ ಸಭೆ ಕರೆದರು. ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸರ್ವಾನುಮತದಿಂದ ನಿರ್ಧರಿಸಲಾಯಿತು. ಅಲ್ಲಿ ಅವರು ಈ ಹಿಂದೆ ಅಕ್ಟೋಬರ್ 2021ರವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ನೇಮಕಾತಿ ಆಯೋಗವನ್ನು ರಚಿಸಿದ್ದರೆ ನ್ಯಾಯಾಂಗ ಹೊಣೆಗಾರಿಕೆಯ ಸಮಸ್ಯೆ ಬಗೆಹರಿಸುತ್ತಿತ್ತು; ಜಗದೀಪ್ ಧಂಖರ್

ಇದನ್ನೂ ಓದಿ
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧ ತನಿಖೆ ಆರಂಭಿಸುವ ಮತ್ತು ದೋಷಾರೋಪಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ವರ್ಗಾವಣೆ ಮಾಡುವುದರಿಂದ ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸ ಕುಸಿಯುತ್ತದೆ ಎಂದು ಕೊಲಿಜಿಯಂನ ಕೆಲವು ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ವರ್ಮಾ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಬೇಕೆಂದು ಅವರು ಕೋರಿದ್ದಾರೆ. ಅವರು ನಿರಾಕರಿಸಿದರೆ ಸಂಸತ್ತಿನಲ್ಲಿ ದೋಷಾರೋಪಣೆ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು.

ಇದನ್ನೂ ಓದಿ: ಭಾರತ ಸರ್ಕಾರ ವಿರುದ್ಧ ತಿರುಗಿನಿಂತ ಇಲಾನ್ ಮಸ್ಕ್ ಕಂಪನಿ; ಕರ್ನಾಟಕ ಹೈಕೋರ್ಟ್​​ನಲ್ಲಿ ಎಕ್ಸ್​​ನಿಂದ ಮೊಕದ್ದಮೆ

ಸಂವಿಧಾನದ ಪ್ರಕಾರ, ಯಾವುದೇ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧದ ಭ್ರಷ್ಟಾಚಾರ, ದುರ್ನಡತೆ ಅಥವಾ ಅಕ್ರಮಗಳ ಆರೋಪಗಳನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ 1999ರಲ್ಲಿ ಆಂತರಿಕ ಕಾರ್ಯವಿಧಾನವನ್ನು ರೂಪಿಸಿತು. ಮಾರ್ಗಸೂಚಿಗಳ ಪ್ರಕಾರ, ಮುಖ್ಯ ನ್ಯಾಯಾಧೀಶರು ಮೊದಲು ಆರೋಪಿ ನ್ಯಾಯಾಧೀಶರಿಂದ ವಿವರಣೆಯನ್ನು ಪಡೆಯುತ್ತಾರೆ. ಆ ಪ್ರತಿಕ್ರಿಯೆ ಅತೃಪ್ತಿಕರವಾಗಿದ್ದರೆ ಅಥವಾ ಸಂಪೂರ್ಣ ತನಿಖೆ ಅಗತ್ಯವಿದ್ದರೆ ಸಿಜೆಐ ಒಬ್ಬ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮತ್ತು ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಂತರಿಕ ಸಮಿತಿಯನ್ನು ರಚಿಸಬೇಕಾಗುತ್ತದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ, ಸಂಬಂಧಪಟ್ಟ ನ್ಯಾಯಾಧೀಶರನ್ನು ರಾಜೀನಾಮೆ ನೀಡುವಂತೆ ಕೇಳಬಹುದು ಅಥವಾ ದೋಷಾರೋಪಣೆಯನ್ನು ಎದುರಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ