AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ ಕೋಚಿಂಗ್ ಸೆಂಟರ್​​ನಲ್ಲಿ ಭೀಕರ ಬೆಂಕಿ ದುರಂತ; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸ್ಥಳಕ್ಕೆ ತಕ್ಷಣವೇ ಹಿರಿಯ ಅಧಿಕಾರಿಗಳನ್ನು ಕಳುಹಿಸುವಂತೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಲು ಆದ್ಯತೆ ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಲವರನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಹಲವರು ಸಿಲುಕಿರುವ ಆತಂಕವಿದ್ದು, ಅಗ್ನಿಶಾಮಕ ದಳವು ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ.

ಲಕ್ನೋ ಕೋಚಿಂಗ್ ಸೆಂಟರ್​​ನಲ್ಲಿ ಭೀಕರ ಬೆಂಕಿ ದುರಂತ; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು
Lucknow Fire Accident Image Credit source: PTI
ಸುಷ್ಮಾ ಚಕ್ರೆ
|

Updated on:Jun 22, 2026 | 5:57 PM

Share

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ 3 ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್​​ನಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಜೋನ್ ಇತ್ತು. ಬೆಂಕಿ ಮತ್ತು ದಟ್ಟ ಹೊಗೆಯಿಂದ ಪಾರಾಗಲು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಎದೆ ನಡುಗಿಸುವಂತಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.

ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಅಲಿಗಂಜ್‌ನ ಉಷಾ ಮೆಹ್ತಾ ಮಾರ್ಗದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮವಾಗಿ ಕೋಚಿಂಗ್ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಟ್ಟಡದ ಒಳಗೆ ಸಿಲುಕಿಕೊಂಡರು. ದಟ್ಟ ಹೊಗೆಯಿಂದ ಉಸಿರುಗಟ್ಟಿದ ವಿದ್ಯಾರ್ಥಿಗಳು ಪ್ರಾಣ ಭಯದಿಂದ ಮೊದಲ ಮಹಡಿಯ ಕಿಟಕಿಗಳಿಂದ ಜಿಗಿದಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಈ ವೇಳೆ ಸುಮಾರು 14ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಹೈಡ್ರಾಲಿಕ್ ಪ್ಲಾಟ್‌ಫಾರ್ಮ್ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು.

ಇದನ್ನೂ ಓದಿ: ಕೊಲ್ಕತ್ತಾದ ಸರ್ಕಾರಿ ಕಟ್ಟಡದಲ್ಲಿ ಅತಿದೊಡ್ಡ ಬೆಂಕಿ ಅವಘಡ; 4,000 ಇವಿಎಂಗಳು ಸುಟ್ಟು ಕರಕಲು

ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಟ್ಟಡದ ಸುರಕ್ಷತಾ ಕ್ರಮಗಳ ಲೋಪದ ಬಗ್ಗೆಯೂ ಇದೀಗ ತನಿಖೆಯಾಗಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಅಗ್ನಿ ಅವಘಡದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣವೇ ಸ್ಥಳಕ್ಕೆ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಕ್ಷಣಾ ಪ್ರಯತ್ನಗಳ ಬಗ್ಗೆ ನಿರಂತರ ನಿಗಾ ವಹಿಸುವಂತೆ ಅವರು ಆಡಳಿತ ಮಂಡಳಿಗೆ ನಿರ್ದೇಶಿಸಿದ್ದಾರೆ. ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Mon, 22 June 26

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?