Fire Accident: ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಅವಘಡ; ಕಟ್ಟಡದಲ್ಲಿದ್ದ ಜನರ ಸ್ಥಳಾಂತರ

| Updated By: ಸುಷ್ಮಾ ಚಕ್ರೆ

Updated on: Mar 23, 2022 | 2:03 PM

ಮುಂಬೈನ ಮಹಾಲಕ್ಷ್ಮಿಯಲ್ಲಿರುವ ವಸತಿ ಕಟ್ಟಡದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ. 5 ಅಂತಸ್ತಿನ ವಿಠ್ಠಲ್ ನಿವಾಸ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Fire Accident: ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಅವಘಡ; ಕಟ್ಟಡದಲ್ಲಿದ್ದ ಜನರ ಸ್ಥಳಾಂತರ
ಮುಂಬೈನಲ್ಲಿ ಬೆಂಕಿ ಅವಘಡ
Follow us on

ಮುಂಬೈ: ಮುಂಬೈನ ಮಹಾಲಕ್ಷ್ಮಿ ಜೇಕಬ್ ಸರ್ಕಲ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ಇದುವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯ (Rescue Operation) ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ 12.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ವಾಸವಾಗಿದ್ದ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಬೆಂಕಿ ನಂದಿಸಲು ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಮುಂಬೈನ ಮಹಾಲಕ್ಷ್ಮಿಯಲ್ಲಿರುವ ವಸತಿ ಕಟ್ಟಡದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ. 5 ಅಂತಸ್ತಿನ ವಿಠ್ಠಲ್ ನಿವಾಸ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆರಂಭಿಕ ವರದಿಗಳ ಪ್ರಕಾರ, ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಹಾಲಕ್ಷ್ಮಿ ಜೇಕಬ್ ವೃತ್ತದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಮುಂಬೈ ಅಗ್ನಿಶಾಮಕ ದಳವು ಮೂರು ಅಗ್ನಿಶಾಮಕ ವಾಹನಗಳು, ಜಂಬೋ ಟ್ಯಾಂಕರ್‌ಗಳು ಮತ್ತು ಒಂದು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂರನೇ ಮಹಡಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಜನವರಿಯಲ್ಲಿ ಮುಂಬೈನ ತಾರ್ಡಿಯೊ ಪ್ರದೇಶದಲ್ಲಿನ ಅಪಾರ್ಟ್​ಮೆಂಟ್​​ನ 19ನೇ ಮಹಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ದುರಂತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದರು. ಈ ಘಟನೆಗೆ ಸಂತಾಪ ಸೂಚಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬ ಸದಸ್ಯರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದರು.

ಇದನ್ನೂ ಓದಿ: ಅಪ್ಪ-ಅಮ್ಮನ ಜೊತೆ ಜಗಳವಾಡಿ ತಾವಿದ್ದ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿ; ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೂ ಪೆಟ್ರೋಲ್ ದಾಳಿ

ಮೈಸೂರು: ಮನೆಯಲ್ಲಿ ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವದಹನ! ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Published On - 2:02 pm, Wed, 23 March 22