Delhi Airport: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಚಿತ್ರ ಕೃಪೆ; ಟ್ವಿಟರ್ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: Twitter
Follow us
|

Updated on: Jul 25, 2023 | 9:57 PM

ನವದೆಹಲಿ: ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ (SpiceJet) ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಮಂಗಳವಾರ ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ. ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಇದನ್ನೂ ಓದಿ: SpiceJet: ಸ್ಪೈಸ್​ಜೆಟ್ ಬಿಕ್ಕಟ್ಟು; ನ್ಯಾಯಮಂಡಳಿ ಬಳಿ ಇನ್ಸಾಲ್ವೆನ್ಸಿ ಕ್ರಮಕ್ಕೆ ಮನವಿ ಮಾಡಿದ ವಿಮಾನ ಗುತ್ತಿಗೆ ಸಂಸ್ಥೆ; ನನಗೇನೂ ಸಮಸ್ಯೆ ಇಲ್ಲ ಎನ್ನುವ ಸ್ಪೈಸ್​ಜೆಟ್

ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು.

ವಿಮಾನಕ್ಕೆ ಬೆಂಕಿಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ

ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ

ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ

ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್

ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ

ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್

ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ

ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ

‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?

ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?