ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಬೆಂಕಿ ಅವಘಡ
Azadpur Mandi: ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. 11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು ನೋವು ಬಗ್ಗೆ ಈವರೆಗೆ ವರದಿ ಆಗಿಲ್ಲ.
ದೆಹಲಿ ಸೆಪ್ಟೆಂಬರ್ 29: ದೆಹಲಿಯ (Delhi) ಆಜಾದ್‌ಪುರ ಮಂಡಿಯಲ್ಲಿ (Azadpur Mandi) ಶುಕ್ರವಾರ ಸಂಜೆ 5:20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.
11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು ನೋವು ಬಗ್ಗೆ ಈವರೆಗೆ ವರದಿ ಆಗಿಲ್ಲ.
VIDEO | Fire breaks out at Azadpur Mandi in Delhi. Multiple fire tenders are at the spot. More details are awaited. pic.twitter.com/Y4LCesLpZV
— Press Trust of India (@PTI_News) September 29, 2023
ಆಜಾದ್‌ಪುರ ಗೇಟ್ ನಂ. 1 ರ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ನಾವು ಅದನ್ನು ಸಂಪೂರ್ಣವಾಗಿ ನಂದಿಸಿದ್ದೇವೆ. ಯಾರಿಗೂ ಗಾಯವಾಗಿಲ್ಲ. ಘಟನಾ ಸ್ಥಳದಲ್ಲಿ 7-8 ವಾಹನಗಳಿವೆ. ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ. ನಮ್ಮ ವಾಹನ ವೇಗವಾಗಿ ಬಂದಿದ್ದು, 15-20 ನಿಮಿಷದಲ್ಲಿ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:07 pm, Fri, 29 September 23