ಗುಜರಾತ್: ಭರೂಚ್ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, 25 ಮಂದಿಗೆ ಗಾಯ
ಬೆಂಕಿ ನಂದಿಸಿದ ನಂತರ ಮತ್ತು ರಕ್ಷಣಾ ತಂಡಗಳು ಆವರಣಕ್ಕೆ ಪ್ರವೇಶಿಸಿದ ನಂತರ ಚಿತ್ರವು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ (chemical factory) ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡ ನಂತರ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತ್ ರಸಾಯನ್ (Bharat Rasayan) ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ. ಆರು ಕಾರ್ಮಿಕರನ್ನು ಭರೂಚ್ ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತುಷಾರ್ ಸುಮೇರಾ ತಿಳಿಸಿದ್ದಾರೆ.
Gujarat | Fire breaks out at Bharat Rasayan company at Dahej GIDC industrial estate in Bharuch district. Further details awaited. pic.twitter.com/zPv1RLZEnn
— ANI (@ANI) May 17, 2022
ಬೆಂಕಿ ನಂದಿಸಿದ ನಂತರ ಮತ್ತು ರಕ್ಷಣಾ ತಂಡಗಳು ಆವರಣಕ್ಕೆ ಪ್ರವೇಶಿಸಿದ ನಂತರ ಚಿತ್ರವು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 8:07 pm, Tue, 17 May 22