ಗುಜರಾತ್: ಭರೂಚ್ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, 25 ಮಂದಿಗೆ ಗಾಯ

| Updated By: ರಶ್ಮಿ ಕಲ್ಲಕಟ್ಟ

Updated on: May 17, 2022 | 8:56 PM

ಬೆಂಕಿ ನಂದಿಸಿದ ನಂತರ ಮತ್ತು ರಕ್ಷಣಾ ತಂಡಗಳು ಆವರಣಕ್ಕೆ ಪ್ರವೇಶಿಸಿದ ನಂತರ ಚಿತ್ರವು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್: ಭರೂಚ್ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, 25 ಮಂದಿಗೆ ಗಾಯ
ಕಾರ್ಖಾನೆಯಲ್ಲಿ ಬೆಂಕಿ
Follow us on

ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ (chemical factory) ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡ ನಂತರ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತ್  ರಸಾಯನ್ (Bharat Rasayan) ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ. ಆರು ಕಾರ್ಮಿಕರನ್ನು ಭರೂಚ್ ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತುಷಾರ್ ಸುಮೇರಾ ತಿಳಿಸಿದ್ದಾರೆ.

ಬೆಂಕಿ ನಂದಿಸಿದ ನಂತರ ಮತ್ತು ರಕ್ಷಣಾ ತಂಡಗಳು ಆವರಣಕ್ಕೆ ಪ್ರವೇಶಿಸಿದ ನಂತರ ಚಿತ್ರವು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:07 pm, Tue, 17 May 22