ರಾಷ್ಟ್ರ ರಾಜಧಾನಿ ದೆಹಲಿಯ ಸಬ್ಜಿ ಮಂಡಿಯ ಕ್ಲಾಕ್ ಟವರ್ ಪ್ರದೇಶದಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಬೆಳಗ್ಗೆ ನಡೆದ ಈ ಅಹಿತಕರ ಘಟನೆಯಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಮನೆಗೆ ಹೆಚ್ಚಿನ ಹಾನಿ ಸಂಭವಿಸಿಲ್ಲ.
ಸ್ಥಳದಲ್ಲಿ 8 ಅಗ್ನಿಶಾಮಕ ವಾಹನಗಳು
ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ನೆರೆಹೊರೆಯವರು ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಕನಿಷ್ಠ ಎಂಟು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬೆಂಕಿಯನ್ನು ನಂದಿಸಲು ಹಲವು ಗಂಟೆಗಳನ್ನು ತೆಗೆದುಕೊಂಡರೂ, ಅಗ್ನಿಶಾಮಕ ಸಿಬ್ಬಂದಿ ಆರು ಮಕ್ಕಳು ಸೇರಿದಂತೆ ಕನಿಷ್ಠ 16 ಜನರನ್ನು ರಕ್ಷಿಸಿದರು ಮತ್ತು ದೊಡ್ಡ ದುರಂತವನ್ನು ತಪ್ಪಿಸಿದರು. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿದೆ.
ಮತ್ತಷ್ಟು ಓದಿ: ಬೆಂಗಳೂರು ಮಡ್ಪೈಪ್ ರೆಸ್ಟೋರೆಂಟ್ ಅಗ್ನಿ ಅವಘಡಕ್ಕೆ ಕಾರಣವೇನು? ಬೆಂಕಿ ಹೊತ್ತಿಕೊಂಡ 15 ನಿಮಿಷದಲ್ಲಿ ಆಗಿದ್ದೇನು? ಇಲ್ಲಿದೆ ವಿವರ
ಅಗ್ನಿ ಅವಘಡಕ್ಕೆ ಕಾರಣ
ಅಗ್ನಿಶಾಮಕ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಸಂಪೂರ್ಣ ತನಿಖೆ ನಡೆಸುತ್ತಾರೆ. ಆದರೆ, ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ನೆರೆಹೊರೆಯವರು ಹೇಳಿದ್ದಾರೆ.
ನಮಗೆ ಪಕ್ಕದ ಮನೆಯಿಂದ ದೊಡ್ಡ ಶಬ್ದ ಕೇಳಿಸಿತು. ನಾವು ನಮ್ಮ ಮನೆಯ ಹೊರಗೆ ಧಾವಿಸಿ ಪರಿಶೀಲಿಸಿದಾಗ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಮನೆಯಲ್ಲಿ ವಾಸವಿದ್ದ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ.
ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದ 13 ಸೆಕೆಂಡುಗಳ ವೀಡಿಯೊದಲ್ಲಿ , ಹಲವಾರು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಮನೆಯಲ್ಲಿ ನೀರನ್ನು ಸಿಂಪಡಿಸುತ್ತಿರುವುದನ್ನು ನೋಡಬಹುದಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ