ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ; ರೋಗಿಗಳೆಲ್ಲರೂ ಪ್ರಾಣಾಪಾಯದಿಂದ ಪಾರು

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಆಸ್ಪತ್ರೆಯ ಮೂರನೇ ಬ್ಲಾಕ್‌ನಲ್ಲಿ ಸಿಲಿಂಡರ್‌ಗಳನ್ನು ಇರಿಸಲಾಗಿರುವ ಸ್ಟೋರ್ ರೂಮ್‌ನಲ್ಲಿ ಸ್ಫೋಟವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ; ರೋಗಿಗಳೆಲ್ಲರೂ ಪ್ರಾಣಾಪಾಯದಿಂದ ಪಾರು
ಬೆಂಕಿ ಅವಘಡ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 27, 2022 | 12:46 PM

ಚೆನ್ನೈ: ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಹಲವಾರು ಅಗ್ನಿಶಾಮಕದಳದ ವಾಹನಗಳು ಈ ಸ್ಥಳಕ್ಕೆ ಧಾವಿಸಿವೆ. ಆಸ್ಪತ್ರೆಯಿಂದ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಮಿಳುನಾಡಿನ (Tamil Nadu) ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.

“ಬೆಂಕಿ ಹೊತ್ತಿಕೊಂಡಿರುವ ಆಸ್ಪತ್ರೆಯಿಂದ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಹಳೆಯ ಕಟ್ಟಡಗಳ ಪೈಕಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೊಸ ಮೂರು ಬ್ಲಾಕ್‌ಗಳು ಬೆಂಕಿಯಿಂದ ಸುರಕ್ಷಿತವಾಗಿವೆ. ಇದುವರೆಗೆ ಯಾವುದೇ ಸಾವು-ನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ” ಎಂದು ರಾಧಾಕೃಷ್ಣನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯ ಹೊರಗೆ ಅವ್ಯವಸ್ಥೆಯನ್ನು ಉಂಟುಮಾಡಿತು. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಆಸ್ಪತ್ರೆಯ ಮೂರನೇ ಬ್ಲಾಕ್‌ನಲ್ಲಿ ಸಿಲಿಂಡರ್‌ಗಳನ್ನು ಇರಿಸಲಾಗಿರುವ ಸ್ಟೋರ್ ರೂಮ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಕಟ್ಟಡದಲ್ಲಿದ್ದ ಆಮ್ಲಜನಕದ ಸಿಲಿಂಡರ್‌ಗಳಲ್ಲಿ ಒಂದು ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆಸ್ಪತ್ರೆಯಿಂದ ಖಚಿತ ಮಾಹಿತಿ ಲಭ್ಯವಾಗಿಲ್ಲ.

ತಮಿಳುನಾಡಿನ ಚೆನ್ನೈನಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಬೆಂಕಿಯನ್ನು ನಿಭಾಯಿಸಲು ಹಲವಾರು ಅಗ್ನಿಶಾಮಕ ಟೆಂಡರ್‌ಗಳನ್ನು ನಿಯೋಜಿಸಲಾಗಿದೆ. ಅಗ್ನಿಶಾಮಕ ದಳದವರು ನೀರನ್ನು ಪೈಪ್​ನಲ್ಲಿ ಸಿಂಪಡಿಸುವುದನ್ನು ಮತ್ತು ಹೊಗೆಯ ದಟ್ಟವಾಗಿ ಸುತ್ತಲೂ ಹರಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಈ ವಿಡಿಯೋ ಚೆನ್ನೈನ ಆಸ್ಪತ್ರೆಯ ಸುತ್ತಲೂ ಆತಂಕ ಮೂಡಿಸಿದೆ.

ಇದನ್ನೂ ಓದಿ: Horrible Video: ಕಸದ ರಾಶಿಗೆ ಬಿದ್ದ ಬೆಂಕಿಯ ರೌದ್ರತೆ ಇದು; ಅಗ್ನಿ ಜ್ವಾಲೆಯ ಭೀಕರತೆ ನೋಡಿ ಬೆಚ್ಚಿದ ಸ್ಥಳೀಯರು

Viral Video: ಕಟೀಲು ದೇವಸ್ಥಾನದಲ್ಲಿ ಬೆಂಕಿ ಎಸೆದುಕೊಂಡ ಭಕ್ತರು; ಅಗ್ನಿ ಕೇಳಿ ಉತ್ಸವದ ಹಿಂದಿದೆ ಶತಮಾನದ ಇತಿಹಾಸ

Published On - 12:45 pm, Wed, 27 April 22