Delhi Fire Accident: ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಬೆಂಕಿ ಅವಘಡ

ದೆಹಲಿಯ ಪೊಲೀಸ್ ಪ್ರಧಾನ ಕಚೇರಿ ಎದುರು ಇರುವ ಆದಾಯ ತೆರಿಗೆ ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಒಟ್ಟು 21 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Delhi Fire Accident: ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಬೆಂಕಿ ಅವಘಡ
ಆದಾಯ ತೆರಿಗೆ ಇಲಾಖೆಯಲ್ಲಿ ಬೆಂಕಿ ಅವಘಡದಲ್ಲಿಸಿಲುಕಿದವರ ರಕ್ಷಣೆ

Updated on: May 14, 2024 | 4:13 PM

ನವದೆಹಲಿ: ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ (Income Tax Office) ಕಚೇರಿಯಲ್ಲಿ ಇಂದು (ಮಂಗಳವಾರ) ದಿಢೀರನೆ ಬೆಂಕಿ (Fire Accident) ಕಾಣಿಸಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ ಆದಾಯ ತೆರಿಗೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡಕ್ಕೆ ಕಾರಣ ಏನೆಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಿಯಂತ್ರಿಸಲು 21 ಅಗ್ನಿಶಾಮಕ ಟೆಂಡರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಇಲಾಖೆ ತಿಳಿಸಿದೆ. ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ನೌಕರರನ್ನು ತಕ್ಷಣವೇ ಸ್ಥಳಾಂತರಿಸಲಾಗುತ್ತಿದೆ. ಅಗ್ನಿಶಾಮಕ ಕಾರ್ಯಾಚರಣೆಯನ್ನು ಸುಲಭಗೊಳಿಸಲು ಕಟ್ಟಡದ ಸುತ್ತಲಿನ ಪ್ರದೇಶವನ್ನು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಜವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತ, ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ಸಾವು

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡಿರುವ ಕಟ್ಟಡವು ಹಳೆಯ ಪೊಲೀಸ್ ಹೆಡ್​ಕ್ವಾರ್ಟರ್ಸ್ ಎದುರು ಇರುವ ಕಟ್ಟಡವಾಗಿದೆ.

“ಆದಾಯ ತೆರಿಗೆ ಸಿಆರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಧ್ಯಾಹ್ನ 3.07ಕ್ಕೆ ಫೋನ್ ಬಂದಿತ್ತು. ನಾವು ಒಟ್ಟು 21 ಅಗ್ನಿಶಾಮಕ ಟೆಂಡರ್‌ಗಳನ್ನು ಕಳುಹಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಾವು ಸ್ಥಳೀಯ ಪೊಲೀಸರಿಗೆ ವಿಷಯದ ಬಗ್ಗೆ ತಿಳಿಸಿದ್ದೇವೆ” ಎಂದು ಡಿಎಫ್‌ಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ