ಮಹಾರಾಷ್ಟ್ರ: ಗ್ಲೌಸ್​ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ, 6 ಮಂದಿ ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ: ಗ್ಲೌಸ್​ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ, 6 ಮಂದಿ ಸಾವು, ಹಲವರಿಗೆ ಗಾಯ
ಅಗ್ನಿ ಅವಘಡ

Updated on: Dec 31, 2023 | 8:03 AM

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ಟೆಂಡರ್‌ಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದೆ.

ರಾತ್ರಿ ವೇಳೆ ಕಾರ್ಖಾನೆ ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಾಗ ಅವರು ಮಲಗಿದ್ದರು ಎಂದು ಕಾರ್ಮಿಕರು ತಿಳಿಸಿದ್ದಾರೆ. ಈ ವೇಳೆ ಸುಮಾರು 10-15 ಮಂದಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Bengaluru Fire Accident: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ಮಾತನಾಡಿ, ನಮಗೆ 2.15ರ ಸುಮಾರಿಗೆ ಕರೆ ಬಂದಿತ್ತು, 6 ಜನರ ದೇಹವನ್ನು ಹೊರಗೆ ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಬುಲ್ಲಾ ಶೇಖ್ (65), ಕೌಸರ್ ಶೇಖ್ (26), ಇಕ್ಬಾಲ್ ಶೇಖ್ (26), ಮತ್ತು ಮಗ್ರೂಫ್ ಶೇಖ್ (25) ಎಂದು ಗುರುತಿಸಲಾಗಿದೆ.

ಬೆಂಕಿ ಹೊತ್ತಿಕೊಂಡಾಗ ಕಟ್ಟಡದೊಳಗೆ 10-15 ಜನರಿದ್ದರು. ಕೆಲವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ಇತರರು ಇನ್ನೂ ಒಳಗೆ ಸಿಲುಕಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ