AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಗಧಗನೆ ಹೊತ್ತಿ ಉರಿದ ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆ; ರೋಗಿಗಳು ಬಚಾವ್

ಗುರುನಾನಕ್ ದೇವ್ ಆಸ್ಪತ್ರೆಯ ಎಕ್ಸ್-ರೇ ವಿಭಾಗದ ಬಳಿಯ ಕಟ್ಟಡದ ಹಿಂಭಾಗದ ಪಾರ್ಕಿಂಗ್ ಪ್ರದೇಶದಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದು ಬೇರೆಡೆಗೆ ವ್ಯಾಪಿಸಿದೆ.

ಧಗಧಗನೆ ಹೊತ್ತಿ ಉರಿದ ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆ; ರೋಗಿಗಳು ಬಚಾವ್
ಗುರುನಾನಕ್ ದೇವ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
TV9 Web
| Updated By: ಸುಷ್ಮಾ ಚಕ್ರೆ|

Updated on: May 14, 2022 | 8:13 PM

Share

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿರುವ ಗುರುನಾನಕ್ ದೇವ್ (Guru Nanak Dev Hospital) ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅದೃಷ್ಟವಶಾತ್, ರೋಗಿಗಳನ್ನು ಕಟ್ಟಡದಿಂದ ಸಮಯಕ್ಕೆ ಸರಿಯಾಗಿ ಬೇರೆಡೆ ಸ್ಥಳಾಂತರಿಸಲಾಯಿತು, ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ದಟ್ಟ ಹೊಗೆ ಎದ್ದು, ಇಡೀ ಆಸ್ಪತ್ರೆಯ ಕಟ್ಟಡವನ್ನು ಸಂಪೂರ್ಣವಾಗಿ ಆವರಿಸಿರುವ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ.

ಗುರುನಾನಕ್ ದೇವ್ ಆಸ್ಪತ್ರೆಯ ಎಕ್ಸ್-ರೇ ವಿಭಾಗದ ಬಳಿಯ ಕಟ್ಟಡದ ಹಿಂಭಾಗದ ಪಾರ್ಕಿಂಗ್ ಪ್ರದೇಶದಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದು ಬೇರೆಡೆಗೆ ವ್ಯಾಪಿಸಿದೆ. ಕಟ್ಟಡದ ವಿವಿಧ ವಾರ್ಡ್‌ಗಳಲ್ಲಿ ದಾಖಲಾದ ರೋಗಿಗಳನ್ನು ಆಸ್ಪತ್ರೆಯ ನೌಕರರು ತಕ್ಷಣ ಬೇರೆಡೆಗೆ ಸ್ಥಳಾಂತರಿಸಿದರು.

“ಆರಂಭದಲ್ಲಿ, ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಸ್ಥಳಕ್ಕೆ ತಕ್ಷಣ ಎಂಟು ಅಗ್ನಿಶಾಮಕ ಟೆಂಡರ್‌ಗಳು ಆಗಮಿಸಿದವು. ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಲವ್‌ಪ್ರೀತ್ ಸಿಂಗ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪರಿಹಾರ ಕಾರ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದ ವಿದ್ಯುತ್ ಸಚಿವ ಹರ್ಭಜನ್ ಸಿಂಗ್ ಸ್ಥಳಕ್ಕೆ ಆಗಮಿಸಿ, ಮಾಹಿತಿ ಪಡೆದಿದ್ದಾರೆ.

ಪಂಜಾಬ್‌ನ ಅಮೃತಸರದಲ್ಲಿರುವ ಗುರುನಾನಕ್ ದೇವ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳಗಳು ಸಕಾಲಕ್ಕೆ ಸ್ಥಳಕ್ಕೆ ಧಾವಿಸಿ, 40 ನಿಮಿಷಗಳಲ್ಲಿ ಬೆಂಕಿಯನ್ನು ಆರಿಸಿದವು. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ. ಆದಾಗ್ಯೂ, ಘಟನೆಯಲ್ಲಿ ಮೂರಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿರುವ ಕಾರಣ ಉಪಕರಣಗಳ ನಷ್ಟವನ್ನು ಇನ್ನೂ ಅಂದಾಜಿಸಲಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ