ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL)ನಲ್ಲಿ ಇಂದು ಮಧ್ಯಾಹ್ನ ತೀವ್ರವಾದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಿದ್ದ ಎಲ್ಲ ಕೆಲಸಗಾರರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಎಚ್ಪಿಎಲ್ ಘಟಕದಲ್ಲಿ ಏನೋ ಸ್ಫೋಟಗೊಂಡ ಶಬ್ದ ಕೇಳಿತು. ಅದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸುಮಾರು 6 ಮಂದಿ ಘಟಕದೊಳಗೆ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಯಾವುದೇ ಸಾವಿನ, ಗಾಯದ ಪ್ರಕರಣಗಳು ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಗೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಎಚ್ಪಿಸಿಎಲ್ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್ಲೈನ್ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಸಿಡಿಯುವನ್ನು ಮುಚ್ಚಲಾಗಿದೆ.
ಇದನ್ನೂ ಓದಿ: ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ
Published On - 4:58 pm, Tue, 25 May 21