
ದೆಹಲಿ: ರಾಜಧಾನಿ ದೆಹಲಿಯ ಸಂಸತ್ನ ಅನೆಕ್ಸ್ ಕಟ್ಟಡದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಕಟ್ಟಡದ ಆರನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಆಗಮಿಸಿವೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.