Hyderabad Fire Accident: ಹೈದರಾಬಾದ್‌ನ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ
ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಚಿಕ್ಕಡಪಲ್ಲಿಯಲ್ಲಿರುವ ಟೆಂಟ್ ಸಗಟು ಸರಬರಾಜು ಗೋದಾಮಿನಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.
ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನೂ ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಪೊಲೀಸರ ಪ್ರಕಾರ, ಈ ಘಟನೆ ಇಂದು ಮುಂಜಾನೆ ನಡೆದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ