ಹೈದರಾಬಾದ್‌ನ ಚಿಕ್ಕಡಪಲ್ಲಿ ಪ್ರದೇಶದ ಗೋದಾಮಿನಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಚಿಕ್ಕಡಪಲ್ಲಿಯಲ್ಲಿರುವ ಟೆಂಟ್ ಸಗಟು ಸರಬರಾಜು ಗೋದಾಮಿನಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.
ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನೂ ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಪೊಲೀಸರ ಪ್ರಕಾರ, ಈ ಘಟನೆ ಇಂದು ಮುಂಜಾನೆ ನಡೆದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ