Delhi Fire ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಕಟ್ಟಡದಲ್ಲಿ ಬೆಂಕಿ ಅವಘಡ; ಮೃತರ ಸಂಖ್ಯೆ 26ಕ್ಕೆ ಏರಿಕೆ

| Updated By: ರಶ್ಮಿ ಕಲ್ಲಕಟ್ಟ

Updated on: May 13, 2022 | 11:17 PM

ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ ಎಂದು ದೆಹಲಿ  ಪೊಲೀಸರು ಹೇಳಿದ್ದಾರೆ.

Delhi Fire ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಕಟ್ಟಡದಲ್ಲಿ ಬೆಂಕಿ ಅವಘಡ; ಮೃತರ ಸಂಖ್ಯೆ 26ಕ್ಕೆ ಏರಿಕೆ
ದೆಹಲಿಯಲ್ಲಿ ಅಗ್ನಿ ಅವಘಡ
Image Credit source: Twitter
Follow us on

ಪಶ್ಚಿಮ ದೆಹಲಿಯ (Delhi) ಮುಂಡಕಾ ಮೆಟ್ರೋ ನಿಲ್ದಾಣದ(Mundka metro station) ಬಳಿಯಿರುವ ಕಟ್ಟಡವೊಂದರಲ್ಲಿ ಶುಕ್ರವಾರ ಭಾರೀ ಬೆಂಕಿ (Fire) ಅವಘಡ ಸಂಭವಿಸಿದ್ದು, 26 ಮಂದಿ ಸಜೀವ ದಹನವಾಗಿದ್ದಾರೆ. ಈವರೆಗೆ 26 ಮೃತದೇಹಗಳನ್ನು ಹೊರ ತೆಗೆದಿದ್ದೇವೆ. ಕಟ್ಟಡದಲ್ಲಿ ಸಿಲುಕಿದ್ದ 50 ಜನರನ್ನು ರಕ್ಷಿಸಲಾಗಿದೆ ದೆಹಲಿ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ನಡೆಸುತ್ತಿದ್ದೇವೆ. 30 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ ಎಂದು ದೆಹಲಿ  ಪೊಲೀಸರು ಹೇಳಿದ್ದಾರೆ.  3 ಅಂತಸ್ತಿನ ವಾಣಿಜ್ಯ ಕಟ್ಟಡದಿಂದ ಒಟ್ಟು 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೂರನೇ ಮಹಡಿಯಲ್ಲಿ ಇನ್ನೂ ಶೋಧಿಸಲಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ. ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಇನ್ನೂ ಹೆಚ್ಚಿನವರು ಸಿಕ್ಕಿಬಿದ್ದಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯ ಮಾಹಿತಿಯ ಪ್ರಕಾರ 12 ಜನರು ಗಾಯಗೊಂಡಿದ್ದು ಇವರೆಲ್ಲರೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಮಹಡಿಗಳಲ್ಲಿ ಬೆಂಕಿ ವ್ಯಾಪಿಸಿದೆ ಎಂದು ಹೊರ ಜಿಲ್ಲೆ ಡಿಸಿಪಿ ಸಮೀರ್ ಶರ್ಮಾ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಬೆಂಕಿ ನಂದಿಸಲು 24 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಅಧಿಕಾರಿಗಳು ಸಂಜೆ 4.40 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಮೆಟ್ರೋ ನಿಲ್ದಾಣದ ಪಿಲ್ಲರ್ 544 ರ ಬಳಿ ಬೆಂಕಿ ಕಾಣಿಸಿಕೊಂಡಿತು ಎಂದು ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. ಆರಂಭದಲ್ಲಿ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ನಂತರ 14 ತಂಡಗಳನ್ನು ಕಳುಹಿಸಲಾಯಿತು ಎಂದು ಅವರು ಹೇಳಿದ್ದಾರೆ.

ಈ ಕಟ್ಟಡವನ್ನು ಸಾಮಾನ್ಯವಾಗಿ ಕಂಪನಿಗಳಿಗೆ ಕಚೇರಿ ಸ್ಥಳಾವಕಾಶವನ್ನು ಒದಗಿಸುವಂತಹ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯಾಗಿರುವ ಕಟ್ಟಡದ ಮೊದಲ ಮಹಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಸ್ಥೆಯ ಮಾಲೀಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ. ದುಃಖಿತ ಕುಟುಂಬಗಳಿಗೆ ನನ್ನ ಕಂಬನಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇಂಗ್ಲಿಷ್​​ನಲ್ಲಿ ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Fri, 13 May 22