Fire In Vande Bharat Express ಭೋಪಾಲ್-ದೆಹಲಿ ವಂದೇ ಭಾರತ್ ರೈಲಿನಲ್ಲಿ ಅಗ್ನಿ ಅವಘಡ

| Updated By: ರಮೇಶ್ ಬಿ. ಜವಳಗೇರಾ

Updated on: Jul 17, 2023 | 9:00 AM

ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಈ ಬಗ್ಗೆ ರೈಲು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Fire In Vande Bharat Express ಭೋಪಾಲ್-ದೆಹಲಿ ವಂದೇ ಭಾರತ್ ರೈಲಿನಲ್ಲಿ ಅಗ್ನಿ ಅವಘಡ
Follow us on

ಭೋಪಾಲ್, (ಜುಲೈ 17): ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ( Vande Bharat Express) ಅಗ್ನಿ(Fire) ಅವಘಡ ಸಂಭವಿಸಿದೆ. ಇಂದು (ಜುಲೈ 17) ಬೆಳಗ್ಗೆ ಮಧ್ಯಪ್ರದೇಶದ ಬಿನಾ ಜಿಲ್ಲೆಯ ಕುರ್ವೈ ಕೆಥೋರಾ ಬಳಿ ರೈಲು ಸಂಚರಿಸುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೆಳಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.   20171 ವಂದೇ ಭಾರತ್​​ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ದಿಢೀರ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲ್ವೆ ಪೊಲೀಸ್ ಸಿಬ್ಬಂದಿಯೊಬ್ಬರು ಮಣ್ಣಿನಿಂದ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಬೋಗಿಯ ಕೆಳಭಾಗದಲ್ಲಿ ಕೊಂಚ ಸುಟ್ಟು ಹೋಗಿದ್ದು, ಇನ್ನು ಈ ಅಗ್ನಿ ಅವಘಡಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Published On - 8:45 am, Mon, 17 July 23