Tamil Nadu: ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ: ಓರ್ವ ಮಹಿಳೆ ಸಜೀವದಹನ, 8 ಮಹಿಳೆಯರಿಗೆ ಗಾಯ

ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಮಹಿಳೆ ಸಜೀವದಹನವಾಗಿರುವಂತಹ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಶಿವನಾರ್ಪುರಂನಲ್ಲಿ ನಡೆದಿದೆ.

Tamil Nadu: ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ: ಓರ್ವ ಮಹಿಳೆ ಸಜೀವದಹನ, 8 ಮಹಿಳೆಯರಿಗೆ ಗಾಯ
ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ

Updated on: Mar 05, 2023 | 8:52 PM

ತಮಿಳುನಾಡು: ಪಟಾಕಿ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ (Fire breaks out) ಹೊತ್ತಿಕೊಂಡ ಪರಿಣಾಮ ಓರ್ವ ಮಹಿಳೆ ಸಜೀವದಹನವಾಗಿರುವಂತಹ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಶಿವನಾರ್ಪುರಂನಲ್ಲಿ ನಡೆದಿದೆ. ಘಟನೆಯಲ್ಲಿ 8 ಮಹಿಳೆಯರಿಗೆ ಗಾಯವಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳು ಮಹಿಳೆಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಪೊಲೀಸರು ಮತ್ತು ಇತರ ಜಿಲ್ಲಾ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸ್ಥಳೀಯರ ಪ್ರಕಾರ, ಇಂದು ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಆ ಪ್ರದೇಶದಲ್ಲಿ ಗೊಂದಲದ ವಾತಾವರಣ ಉಂಟಾಗಿದೆ. ನೋಡು ನೋಡುತ್ತಿದ್ದಂತೆ ಬೆಂಕಿ ಭಾರಿ ಸ್ವರೂಪ ಪಡೆದುಕೊಂಡಿದ್ದು, ಬೆಂಕಿ ನಂದಿಸಲು ಜನರು ಯತ್ನಿಸಿದ್ದಾರೆ. ಘಟನೆಯ ಕುರಿತು ಸ್ಥಳೀಯರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನ ಸದ್ಯ ಬೆಂಕಿ ನಂದಿಸಿದೆ.

ಇದನ್ನೂ ಓದಿ: Jammu Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 3.9 ತೀವ್ರತೆ ದಾಖಲು

ಕಡಲೂರು ಜಿಲ್ಲಾಧಿಕಾರಿ ಕೆ.ಬಾಲಸುಬ್ರಮಣ್ಯಂ ಮಾತನಾಡಿ, ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಮಹಿಳೆಯರಿಗೆ ಸಾಧಾರಣ ಸುಟ್ಟ ಗಾಯಗಳಾಗಿವೆ. ಸದ್ಯ ಎಲ್ಲರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Sun, 5 March 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us