ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ

|

Updated on: May 01, 2021 | 7:45 AM

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ
ದುರ್ಘಟನೆಯ ದೃಶ್ಯ (ಎಎನ್​ಐ)
Follow us on

ಗಾಂಧಿನಗರ: ಗುಜರಾತ್ ರಾಜ್ಯದ ಭರೂಚ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 18 ಜನ ದುರ್ಮರಣಕ್ಕೀಡಾಗಿದ್ದಾರೆ. ಇಂದು (ಮೇ.1) ನಸುಕಿನ ವೇಳೆಯಲ್ಲಿ ಸಂಭವಿಸಿದ ಅನಾಹುತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಮೃತಪಟ್ಟಿದ್ದು, ಬದುಕುಳಿದವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಸುಕಿನ ಜಾವ 1 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ದುರಂತಕ್ಕೆ ಶಾರ್ಟ್​ ಸರ್ಕ್ಯೂಟ್ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:
ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ 

ಮುಂಬೈನ ವಿರಾರ್‌ನ ವಿಜಯ ವಲ್ಲಭ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 13 ಜನರ ಸಾವು

Published On - 7:34 am, Sat, 1 May 21