Ahmedabad Hospital Fire: ಅಹಮದಾಬಾದ್​ನ​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 100ಕ್ಕೂ ಅಧಿಕ ರೋಗಿಗಳ ಸ್ಥಳಾಂತರ

|

Updated on: Jul 30, 2023 | 9:12 AM

ಗುಜರಾತ್​ನ ಅಹಮದಾಬಾದ್​ನಲ್ಲಿರುವ ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 100ಕ್ಕೂ ಅಧಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ahmedabad Hospital Fire: ಅಹಮದಾಬಾದ್​ನ​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 100ಕ್ಕೂ ಅಧಿಕ ರೋಗಿಗಳ ಸ್ಥಳಾಂತರ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ
Image Credit source: NDTV
Follow us on

ಗುಜರಾತ್​ನ ಅಹಮದಾಬಾದ್​ನಲ್ಲಿರುವ ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 100ಕ್ಕೂ ಅಧಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Uttar Pradesh: ಎಲೆಕ್ಟ್ರಾನಿಕ್ಸ್​ ಶೋರೂಂನಲ್ಲಿ ಅಗ್ನಿ ಅವಘಡ, ನಾಲ್ವರು ಸಜೀವ ದಹನ

ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಕೆಲಸ ಮಾಡುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಂಡಿ ಚಂಪಾವತ್ ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಬಹುಮಹಡಿ ಕಟ್ಟಡದಿಂದ ಸುಮಾರು 100 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆಸ್ಪತ್ರೆಯನ್ನು ಚಾರಿಟಬಲ್ ಟ್ರಸ್ಟ್ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Sun, 30 July 23