ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಡೆಸಿದ್ದಾರೆ.

ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ
ಬೆಂಕಿ ಹೊತ್ತಿಕೊಂಡಿರುವ ಸ್ಥಳದಲ್ಲಿ ಆವರಿಸಿರುವ ದಟ್ಟವಾದ ಹೊಗೆ (ಚಿತ್ರ ಕೃಪೆ-ಎಎನ್​ಐ)
Follow us
Lakshmi Hegde
|

Updated on:Apr 28, 2021 | 1:50 PM

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ಎಂ.ಆರ್​.ಫಾರ್ಮಾ ಪ್ರೈವೇಟ್ ಲಿಮಿಟೆಡ್​ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಎಎನ್​ಐ ವರದಿ ಮಾಡಿದೆ. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ, ಬೆಂಕಿ ನಂದಿಸಿದ್ದಾರೆ.

ಔಷಧಗಳಲ್ಲಿ ಬಳಸುವ ವಿಶೇಷ ರಾಸಾಯನಿಕ ತಯಾರಿಕಾ ಕಂಪನಿ ಇದಾಗಿದೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಮಯದಲ್ಲಿ ಎಂಟು ಜನ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ರಕ್ಷಿಸಲಾಗಿದೆ. ಅದೃಷ್ಟವಶಾತ್​ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ಸಿಕ್ಕಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಂತರ ಬೆಂಕಿ ನಂದಿಸಿದ್ದಾರೆ.  ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ.

ಇಂದು ಬೆಳಗ್ಗೆಯಷ್ಟೇ ಥಾಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ನಾಲ್ವರು ರೋಗಿಗಳು ಮೃತಪಟ್ಟ ಘಟನೆ ವರದಿಯಾಗಿದೆ. ಆಸ್ಪತ್ರೆಯ ಐಸಿಯು ರೂಂನಲ್ಲಿ ಬೆಂಕಿ ಹೊತ್ತುಕೊಂಡು, ಮೊದಲ ಮಹಡಿ ಪೂರ್ತಿಯಾಗಿ ಧ್ವಂಸಗೊಂಡಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 4 ರೋಗಿಗಳು ಸಾವು, ಉಳಿದವರ ಸ್ಥಳಾಂತರ

ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು

ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಜವಂಶಸ್ಥ ಯದುವೀರ್

Published On - 1:46 pm, Wed, 28 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್