ಕಾನ್ಪುರ್​ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 140 ರೋಗಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

|

Updated on: Mar 28, 2021 | 1:23 PM

Uttar Pradesh: ಉತ್ತರ ಪ್ರದೇಶ ಸರ್ಕಾರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿನಲ್ಲಿರುವ ಎಲ್​ಪಿಎಸ್ ಇನ್ಸಿಟ್ಯೂಟ್ ಆಫ್ ಕಾರ್ಡಿಯಾಲಜಿಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ

ಕಾನ್ಪುರ್​ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 140 ರೋಗಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಆಸ್ಪತ್ರೆಯಲ್ಲಿ ಬೆಂಕಿನಂದಿಸಲು ಬಂದ ಅಗ್ನಿಶಾಮಕದಳ
Follow us on

ಲಕ್ನೋ: ಉತ್ತರಪ್ರದೇಶದ ಕಾನ್ಪುರ್ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಸಾವು ನೋವು ವರದಿಯಾಗಿಲ್ಲ. ಉತ್ತರ ಪ್ರದೇಶ ಸರ್ಕಾರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿನಲ್ಲಿರುವ ಎಲ್​ಪಿಎಸ್ ಇನ್ಸಿಟ್ಯೂಟ್ ಆಫ್ ಕಾರ್ಡಿಯಾಲಜಿಯಲ್ಲಿ ಬೆಳಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿ ಆವರಿಸುತ್ತಿದ್ದಂತೆಯೇ 140 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದೇವೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಕಾನ್ಪುರ್ ಪೊಲೀಸ್ ಆಯುಕ್ತ ಅಸೀಮ್ ಅರುಣ್ ಹೇಳಿದ್ದಾರೆ.

ಸ್ಟೋರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ. 140 ಮಂದಿ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದೆ ಎಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಂಶಿ ಕುಮಾರ್ ಹೇಳಿದ್ದಾರೆ.

ಕಾನ್ಪುರ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಆಸ್ಪತ್ರೆಯಿಂದ ಸ್ಥಳಾಂತರ ಮಾಡಿರುವ ರೋಗಿಗಳಿಗೆ ತುರ್ತಾಗಿ ಚಿಕಿತ್ಸೆ ನೀಡುವಂತೆ ಅವರು ಹೇಳಿದ್ದಾರೆ. ಈ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಮತ್ತು ಘಟನಾ ಸ್ಥಳಕ್ಕೆ ಸಂದರ್ಶಿಸಿ ವರದಿ ಸಲ್ಲಿಸುವಂತೆ ಆರೋಗ್ಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ.

ಬೆಂಕಿ ಕಾಣಿಸಿಕೊಡ ಕೂಡಲೇ ಮೊದಲ ಮಹಡಿಯಲ್ಲಿರುವ ಕಿಟಕಿ ಗಾಜುಗಳನ್ನು ಒಡೆಯಲಾಗಿದೆ. ಅಗ್ನಿ ಶಾಮಕದಳದ ವಾಹನಗಳು ತಕ್ಷಣವೇ ದೌಡಾಯಿಸಿ ಬೆಂಕಿ ನಂದಿಸಿವೆ ಎಂದು ಕಾನ್ಪುರ್ ಹೆಚ್ಚುವರಿ ಪೊಲೀಸ್ ಆಯುಕ್ತ ಆಕಾಶ್ ಕುಲ್ಹಾರಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹುಡುಗಿಯರು ಜೀನ್ಸ್, ಸ್ಕರ್ಟ್ ಧರಿಸಿದರೆ, ಚುನಾವಣಾ ಅಭ್ಯರ್ಥಿ ಮದ್ಯ ಹಂಚಿದರೆ ಬಹಿಷ್ಕಾರದ ಎಚ್ಚರಿಕೆ