Madan Mitra ಟಿಎಂಸಿ ಶಾಸಕ ಮದನ್ ಮಿತ್ರಾ ಮನೆಯಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯ ಇಲ್ಲ

| Updated By: ರಶ್ಮಿ ಕಲ್ಲಕಟ್ಟ

Updated on: Jun 08, 2021 | 1:13 PM

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನೆಲ ಮಹಡಿಯಲ್ಲಿರುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮಿತ್ರಾ ಮತ್ತು ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಓಡಿದ್ದಾರೆ.

Madan Mitra ಟಿಎಂಸಿ ಶಾಸಕ ಮದನ್ ಮಿತ್ರಾ ಮನೆಯಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯ ಇಲ್ಲ
ಮದನ್ ಮಿತ್ರಾ
Follow us on

ಕೊಲ್ಕತ್ತಾ: ಮಂಗಳವಾರ ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಪ್ರದೇಶದ ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಅಗ್ನಿಶಾಮಕ ಟೆಂಡರ್‌ಗಳು ಶತಮಾನದಷ್ಟು ಹಳೆಯದಾದ ಕಟ್ಟಡದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು ಎಂದು ಅವರು ಹೇಳಿದರು.

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನೆಲ ಮಹಡಿಯಲ್ಲಿರುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮಿತ್ರಾ ಮತ್ತು ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಓಡಿದ್ದಾರೆ. ಬೆಂಕಿ ಅವಘಡದ ನಂತರ  ಮಿತ್ರಾ ಅವರು ಮನೆಯ ಹೊರಗೆ ಆಘಾತಕ್ಕೊಳಗಾಗಿ ಕುಳಿತಿದ್ದರು ಎಂದು ಪಿಟಿಐ ಸುದ್ದಿಸಂಸ್ಥೆ  ವರದಿ ಮಾಡಿದೆ.


ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕದಳದ ಅಧಿಕಾರಿ ಹೇಳಿದರು. ಬೆಂಕಿಗೆ ಶಾರ್ಟ್ ಸರ್ಕ್ಯೂಟ್‌ ಕಾರಣವೆಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ:Narada Sting Case: ಪಶ್ಚಿಮ ಬಂಗಾಳದಲ್ಲಿ ಸಿಬಿಐಯಿಂದ ಟಿಎಂಸಿ ನಾಯಕ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಬಂಧನ

(Fire broke out at West Bengal’s TMC MLA Madan Mitra’s residence in Bhabanipur)

Published On - 1:05 pm, Tue, 8 June 21