Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ
ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ಬಿಂಕಿಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬೆಂಕಿ ಹೊತ್ತಿದ್ದು ಎಲ್ಪಿಜಿ ಸಿಲಿಂಡರ್ ಸ್ಫೋಟದಿಂದ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಪೊಲೀಸರು ಅದನ್ನು ಇನ್ನೂ ದೃಢಪಡಿಸಿಲ್ಲ. ಬೆಂಕಿಗೆ ನಿಜವಾದ ಕಾರಣವೇನು ಎಂದು ನಮಗೆ ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್ ಗ್ಯಾಸ್ ಮತ್ತು ರೆಗ್ಯುಲೇಟರ್ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.
ಅಂಕುಶ್ ಕುಮಾರ್ (10), ಶಿವಾನಿ ಕುಮಾರಿ (9), ಸೋನಿ ಕುಮಾರಿ (8), ಸೀಮಾ ಕುಮಾರಿ (5) ಮತ್ತು ಅಂಶುಕುಮಾರಿ(10) ಮೃತರು. ಇವರಲ್ಲಿ ಅಂಕುಶ್, ಶಿವಾನಿ, ಸೋನಿ, ಸೀಮಾ ಒಡಹುಟ್ಟಿದವರಾಗಿದ್ದು, ಅಂಶುಕುಮಾರಿ ಈ ಮಕ್ಕಳ ಸಂಬಂಧಿಯಾಗಿದ್ದಾರೆ. ಮನೆಗೆ ಬೆಂಕಿ ಬಿದ್ದಾಗ ಅವರನ್ನು ರಕ್ಷಿಸಲು ಯತ್ನಿಸಿದ ಅಶೋಕ್ ಪಸ್ವಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ನಾಲ್ಕು ಮಕ್ಕಳ ತಂದೆಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ. ಸದ್ಯ ಎಲ್ಲರ ದೇಹವನ್ನೂ ಪೋಸ್ಟ್ ಮಾರ್ಟಮ್ಗೆ ಕಳಿಸಲಾಗಿದೆ.
ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ವಿಧಿವಿಜ್ಞಾನ ತಜ್ಞರ ಸಹಾಯವನ್ನೂ ಕೋರಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಹಾಗೇ, ಬಂಕಾ ಜಿಲ್ಲೆಯ ಜಿಲ್ಲಾಧಿಕಾರಿ ಶಹರಾಶ್ ಭಗತ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಇದು ಯಾವ ಸಿಗ್ನಲ್ಲೋ ಮಾರಾಯಾ!? 2021ರಲ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆದ ವಿಚಿತ್ರ ಘಟನೆಗಳ ರಿವೈಂಡ್ ಮಾಡೋಣಾ ಬನ್ನೀ