ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ದೌಡು

| Updated By: ರಮೇಶ್ ಬಿ. ಜವಳಗೇರಾ

Updated on: Nov 27, 2022 | 4:08 PM

ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಅಗ್ನಿಶಾಮಕ ದಳ ದೌಡಾಯಸಿದೆ.

ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ದೌಡು
Bangalore Howrah express train
Follow us on

ಚಿತ್ತೂರು(ಆಂಧ್ರಪ್ರದೇಶ) ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಇಂದು(ನವೆಂಬರ್ 27) ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿ ಬೋಗಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದ್ರೆ, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎನ್ನಿವುದು ತಿಳಿದುಬಂದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

 

 

Published On - 3:54 pm, Sun, 27 November 22