Pune Massive Fire: ಪುಣೆಯ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 18 ಜನರು ಸಜೀವದಹನ
Pune Chemical Factory Fire: ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ.
ಪುಣೆ: ಖಾಸಗಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 18 ಜನ ಸಜೀವದಹನವಾದ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯ ಘೋಟವಾಡ ಫಾಟಾ ಎಂಬಲ್ಲಿ ಇಂದು (ಜೂನ್ 7) ಸಂಜೆ ಸಂಭವಿಸಿದೆ. ಕಾರ್ಖಾನೆಯ ಒಳಗೆ ಇರುವವರನ್ನು ಹುಡುಕುವ ಮತ್ತು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಪುಣೆ ಅಗ್ನಿಶಾಮಕ ದಳದ ಮಾಹಿತಿಯಂತೆ, ಫ್ಯಾಕ್ಟರಿಯ ಒಳಗೆ 37 ಮಂದಿ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ 20 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೂ ಮೊದಲು 12 ಮಂದಿ ಪ್ರಾಣ ಕಳೆದುಕೊಂಡಿದ್ದು ಖಚಿತವಾಗಿತ್ತು. ಬಳಿಕ, 5 ಮಂದಿಯ ಹುಡುಕಾಟ ನಡೆದಿತ್ತು.
ಅಲ್ಲಿಯವರೆಗೆ ಪತ್ತೆಯಾಗದಿರುವ ಕಾರ್ಮಿಕರಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯ ಭರದಿಂದ ಮಾಡಲಾಗಿತ್ತು. ಅಗ್ನಿ ಪ್ರಮಾಣ ನಿಯಂತ್ರಣಕ್ಕೆ ಸಿಕ್ಕಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದರು.
ಸದ್ಯದ ಮಾಹಿತಿ ಪ್ರಕಾರ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 18 ಮಂದಿ ಬಲಿಯಾಗಿದ್ದಾರೆ. ಉಳಿದ 19 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 11,958 ಮಂದಿಗೆ ಕೊರೊನಾ ಸೋಂಕು, 340 ಸಾವು
ಆಸ್ಪತ್ರೆ ಸಿಬ್ಬಂದಿ, ಅಗ್ನಿಶಾಮದ ದಳದ ಸಮಯಪ್ರಜ್ಞೆಯಿಂದ ಮೈಸೂರಿನಲ್ಲಿ 300ಕ್ಕೂ ಹೆಚ್ಚು ರೋಗಿಗಳು ಬಚಾವ್
Published On - 8:23 pm, Mon, 7 June 21