[lazy-load-videos-and-sticky-control id=”LQsPwISxAAk”]
ಹೈದರಾಬಾದ್: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ.
ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅವಘಡದಿಂದ ಭಾರಿ ಹೊಗೆ ಉಂಟಾಗಿರೋ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ 30 ಸೋಂಕಿತರಿದ್ರು. ಇದೀಗ, 15 ಕೊರೊನಾ ಸೋಂಕಿತರನ್ನ PPE ಕಿಟ್ ಧರಿಸಿದ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ ಇನ್ನಿತರೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದು ಕೂಡಲೇ ಸೂಕ್ತ ಕ್ರಮಕ್ಕೆ ಆದೇಶ ಹೊರಡಿಸಿದ್ದಾರೆ.
Published On - 9:06 am, Sun, 9 August 20